ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಮಂದಿ ವೈದ್ಯರು ಮತ್ತು ಏಳು ಮಂದಿ ತರಬೇತಿ ಪಡೆಯುತ್ತಿದ್ದ ವೈದ್ಯರು ಸೋಂಕಿಗೆ ಗುರಿಯಾಗಿದ್ದಾರೆ. ಆಸ್ಪತ್ರೆಯಲ್ಲಿ ಮೂರನೇ ಮತ್ತು ನಾಲ್ಕನೇ ಶ್ರೇಣಿಯ ನೌಕರರು ಮತ್ತು ದಾದಿಯರ ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 190ಕ್ಕೂ ಹೆಚ್ಚಾಗಿದೆ. ಆಸ್ಪತ್ರೆಯ ಸೋಂಕಿತ 60 ಜನ ವೈದ್ಯರು ಚೇತರಿಸಿಕೊಂಡಿದ್ದಾರೆ. ಅಲ್ಲದೇ, ಕೇವಲ 30 ಜನ ವೈದ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದ್ದಾರೆ.

ನಾಯರ್‌ ಆಸ್ಪತ್ರೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದ್ದರೂ, ರೋಗಿಗಳ ಬೆಳವಣಿಗೆಯ ಒತ್ತಡ ಕಡಿಮೆ ಮಾಡಲು ರೋಗಿಗಳನ್ನು ತಿಲಕ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧಾರಾವಿಯಲ್ಲಿ ಈಗ ರೋಗಿಗಳ ಸಂಖ್ಯೆ ನಿಯಂತ್ರಣದಲ್ಲಿದ್ದರೂ, ಇತರ ಸ್ಥಳಗಳಿಂದ ಬರುವ ರೋಗಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಹೀಗಾಗಿ ಇಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

Leave a Reply

Your email address will not be published.

You May Also Like

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ಸರ್ಕಾರದ ಸಪ್ತಪದಿ ಯೋಜನೆಯಡಿ ಮದುವೆ ಆಗ್ಬೇಕಾ..? ಇಲ್ಲಿದೆ ಪೂರ್ಣ ಮಾಹಿತಿ

2019-20 ನೇ ಸಾಲಿನಿಂದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಸೂತ್ತೋಲೆಗಳನ್ನು ಹೊರಡಿಸಲಾಗಿದೆ.

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಸಭೆಯಲ್ಲಿ ತೀರ್ಮಾನ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್ಸಿ ಪರಿಕ್ಷೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸೋಮವಾರ ಸಭೆ ಸೇರುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು…