ಆಸ್ಪತ್ರೆಯಲ್ಲಿನ ಬಹುತೇಕ ಸಿಬ್ಬಂದಿಗೆ ಕೊರೊನಾ!

ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಮಂದಿ ವೈದ್ಯರು ಮತ್ತು ಏಳು ಮಂದಿ ತರಬೇತಿ ಪಡೆಯುತ್ತಿದ್ದ ವೈದ್ಯರು ಸೋಂಕಿಗೆ ಗುರಿಯಾಗಿದ್ದಾರೆ. ಆಸ್ಪತ್ರೆಯಲ್ಲಿ ಮೂರನೇ ಮತ್ತು ನಾಲ್ಕನೇ ಶ್ರೇಣಿಯ ನೌಕರರು ಮತ್ತು ದಾದಿಯರ ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 190ಕ್ಕೂ ಹೆಚ್ಚಾಗಿದೆ. ಆಸ್ಪತ್ರೆಯ ಸೋಂಕಿತ 60 ಜನ ವೈದ್ಯರು ಚೇತರಿಸಿಕೊಂಡಿದ್ದಾರೆ. ಅಲ್ಲದೇ, ಕೇವಲ 30 ಜನ ವೈದ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದ್ದಾರೆ.

ನಾಯರ್‌ ಆಸ್ಪತ್ರೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದ್ದರೂ, ರೋಗಿಗಳ ಬೆಳವಣಿಗೆಯ ಒತ್ತಡ ಕಡಿಮೆ ಮಾಡಲು ರೋಗಿಗಳನ್ನು ತಿಲಕ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧಾರಾವಿಯಲ್ಲಿ ಈಗ ರೋಗಿಗಳ ಸಂಖ್ಯೆ ನಿಯಂತ್ರಣದಲ್ಲಿದ್ದರೂ, ಇತರ ಸ್ಥಳಗಳಿಂದ ಬರುವ ರೋಗಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಹೀಗಾಗಿ ಇಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

Exit mobile version