ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಈ ಬಾರಿಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೇ, ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಮಾರ್ಚ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ತೆಲಂಗಾಣ, ತಮಿಳುನಾಡು ರಾಜ್ಯಗಳು ಪರೀಕ್ಷೆಯನ್ನು ರದ್ದುಗೊಳಿಸಿದ್ದವು, ಸದ್ಯ ಆಂಧ್ರಪ್ರದೇಶ ರಾಜ್ಯವೂ ಇದೇ ನಿರ್ಧಾರ ಕೈಗೊಂಡಿದೆ.

ಆದರೆ, ಕರ್ನಾಟಕ ರಾಜ್ಯದಲ್ಲಿ ಮಾತ್ರ ಪರೀಕ್ಷೆಗಳು ನಡೆಯುತ್ತಿವೆ. ಜೂ. 25ರಂದು ಸುರಕ್ಷಿತವಾಗಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಆಂಧ್ರ ಪ್ರದೇಶದಲ್ಲಿ ಇಲ್ಲಿಯವರೆಗೂ ಒಟ್ಟು 7961 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, 96 ಜನ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ಪರೀಕ್ಷೆ ಬರೆಯುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.…

ಈ ನದಿಗಳ ಜಲಮಾರ್ಗದಲ್ಲಿ ಸರಕು ಸಾಗಾಟಕ್ಕೆ ನಿರ್ಬಂಧ

ರಾಜ್ಯದ 5 ಜಲಮಾರ್ಗಗಳಲ್ಲಿ ಸರಕು ಸಾಗಾಣಿಕೆ ಮಾಡುವ ಮಹತ್ವದ ಯೋಜನೆಗೆ ಆರ್ಥಿಕವಾಗಿ ಲಾಭದಾಯಕವಾಗಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಹಿನ್ನಡೆಯಾಗಿದೆ.

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದ ಐವರ ಸಾವು – ಹಲವರು ಗಂಭೀರ

ತಿರುವನಂತಪುರಂ : ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವಿಸಿದ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ನನಲ್ಲಿ ನಡೆದಿದೆ.