ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 44 ಕೇಸ್ ಗಳು ಗುಣಮುಖ ಹೊಂದಿವೆ. ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದು, 32 ಪ್ರಕರಣ ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಷಯದ ಕುರಿತು ಸ್ವತಃ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಆತಂಕಪಡಬೇಡಿ ಎಂದು ಕೂಡ ಕೋರಿದ್ದಾರೆ.