ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿತರ ವಿಶೇಷ ಚಿಕಿತ್ಸೆಗಾಗಿ ಐಸಿಯು ವಾರ್ಡನಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಜೊತೆಗೆ ವೆಂಟಿಲೇಟರ್ ಕೂಡ ಅತ್ಯವಶ್ಯವಾಗಿ ಬೇಕು. ಈಗಾಗಲೇ ಸರ್ಕಾರ ನಿಗದಿಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಇನ್ಮುಂದೆ ಕೊರೊನಾ ಸೋಂಕಿತರಿಗೆ‌ ಚಿಕಿತ್ಸೆ ನೀಡಲು ಅನುನತಿ ನೀಡಲಾಗಿದೆ.
ಸೋಂಕಿತರ ಬಗ್ಗೆ ಖಾಸಗಿ ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕಿದೆ. ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳು ನೋಂದಣಿಯಾಗಿದ್ದು, ಆ ಆಸ್ಪತ್ರೆಗಳನ್ನೆ ಕೋವಿಡ್ 19 ಚಿಕಿತ್ಸೆಗೆ ನಿಯೋಜಿಸಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಪಾಲಿಸಬೇಕಾದ ನಿಯಮಗಳು


1) ಸೋಂಕಿತರಿಗೆ ಚಿಕಿತ್ಸೆಗಾಗಿ‌ ಸ್ಥಳೀಯ ಜಿಲ್ಲಾಧಿಕಾರಿ, ಬಿಬಿಎಂ ಕಮೀಷನರ್, ನಿರ್ದೇಶಕರು, ಡಿಎಚ್ಓ, ಡಿಎಲ್ಓ ಇತರರಿಂದ ಶಿಫಾರಸ್ಸು ಪತ್ರ ಪಡೆದವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

2) ಸೋಂಕಿತ ದಾಖಲಾದ ಕೂಡಲೇ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯಡಿ ತಕ್ಷಣ ಚಿಕಿತ್ಸೆ ಆರಂಭಿಸಬೇಕು.

3) ಸರ್ಕಾರದ ಚಿಕಿತ್ಸಾ ನಿಯಮಗಳನ್ನು ಕಾಲಕ್ಕೆ ತಕ್ಕಂತೆ ಪಾಲನೆ ಮಾಡಬೇಕು.

4) ಖಾಸಗಿ ಆಸ್ಪತ್ರೆಗಳಿಗೆ ನಿಗದಿ ಪಡಿಸಿದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಜೊತೆಗೆ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.

Leave a Reply

Your email address will not be published. Required fields are marked *

You May Also Like

ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭ

ಬೆಂಗಳೂರು: ಶಾಲೆಗಳಿಗೆ ರಜೆ ಮುಗಿದು ಇನ್ನೇನು ಶಾಲೆಗಳು ಆರಂಭವಾಗುವಷ್ಟರಲ್ಲಿ ಮತ್ತೆ ಸರ್ಕಾರ ಜೂನ್ 14 ರವರೆಗೆ ಬೇಸಿಗೆ ರಜೆ ವಿಸ್ತರಿಸಿದೆ. ಆದರೆ ಜೂನ್ 15 ರಿಂದ 8, 9, 10ನೆ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಇನ್ನು,ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.

ವರ್ಷಕ್ಕೆ ಒಬ್ಬ ಮನುಷ್ಯ 50 ಕಿಲೋ ಅಹಾರ ವ್ಯರ್ಥ ಮಾಡುತ್ತಾನೆ

ನವದೆಹಲಿ: ದೇಶದಲ್ಲಿ ಒಬ್ಬ ಮನುಷ್ಯ ಮಂದು ವಷ೵ಕ್ಕೆ 50 ಕಿಲೋ ಗ್ರಾಂ ಅಹಾರ ವ್ಯಥ೵ ಮಾಡುತ್ತಾನೆ…

ಕನ್ನಡ ನಾಡು ನುಡಿಗೆ ಜಕ್ಕಲಿ ಗ್ರಾಮದ ಕೊಡುಗೆ ಅಪಾರ :ವಿವೇಕಾನಂದಗೌಡ ಪಾಟೀಲ

ಉತ್ತರಪ್ರಭ ಸುದ್ದಿ ನರೆಗಲ್ಲ: ಕನ್ನಡ ನಾಡು ನುಡಿಗೆ ಗದಗ ಜಿಲ್ಲೆಯ ಜಕ್ಕಲಿ ಗ್ರಾಮ ಅಪಾರವಾದ ಕೊಡುಗೆ…

ಪೊಲೀಸ್ ಠಾಣೆಯೇ ದೇವಸ್ಥಾನವಿದ್ದಂತೆ : ಪೂಜೆ ಸಲ್ಲಿಸಿ ಗೌರವ

ಪೊಲೀಸರೆ ದೇವರು, ಪೊಲೀಸ್ ಠಾಣೆಯೇ ದೇವಸ್ಥಾನ ಎನ್ನುವ ಕಲ್ಪನೆಯೊಂದಿದೆ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಿ ಈ ಮೂಲಕ ಕೊರೋನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಯಿತು.