ನವದೆಹಲಿ: ಲಡಾಖ್ ನಲ್ಲಿ ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ ಮುಖ್ಯಸ್ಥ, 3 ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸಂಪೂರ್ಣ ಸನ್ನದ್ಧರಾಗಿರಿ ಎಂಬ ಸೂಚನೆ ನೀಡಿದ್ದಾರೆ.

ಸಚಿವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ನಡೆದ ಘರ್ಷಣೆ ಬಗ್ಗೆ ಚರ್ಚಿಸಲಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಸೂಚಿಸಿದ್ದಾರೆ.

ಗಡಿ ರೇಖೆಯ ಬಳಿ ಇರುವ ಸಂದರ್ಭಕ್ಕೆ ಅನುಗುಣವಾಗಿ ಹಿಂದೆಂದೂ ತೆಗೆದುಕೊಂಡಿರದ ಕ್ರಮ ಕೈಗೊಳ್ಳುವುದಕ್ಕೆ ಸಂಪೂರ್ಣವಾಗಿ ಸನ್ನದ್ಧರಾಗಿರಲು ರಕ್ಷಣಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ಗಸ್ತು ತಿರುಗುವ ವೇಳೆ ಅತ್ಯಂತ ಎಚ್ಚರಿಕೆಯಿಂದ ಇರಲು ಹಾಗೂ ಚೀನಾದ ಗಡಿ ಪ್ರದೇಶದಲ್ಲಿ ಹೆಚ್ಚು ಜಾಗರೂಕರಾಗಿರುವಂತೆ ರಕ್ಷಣಾ ಸಚಿವರು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 947 ಕೊರೊನಾ ಪಾಸಿಟಿವ್! : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 946 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15242…

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಸೋಂಕು!

ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ…

ಕಿರಿಕ್ ಬೆಡಗಿಗೆ ವಿಜಯ್ ಕಳುಹಿಸಿದ ಸಂದೇಶವೇನು?

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ. ಹೈದರಾಬಾದ್ಗೆ ಬಾ…

ರಾಯಚೂರು ಜಿಲ್ಲಾ ನ್ಯಾಯಾದೀಶನ ಅಮಾನತ್ತಿಗೆ ಒತ್ತಾಯ

ವರದಿ: ವಿಠಲ ಕೆಳೂತ್ ಮಸ್ಕಿ: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.‌ಬಿ. ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ…