ದೆಹಲಿ: ಚೀನಾ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಡುವೆ ಭಾರೀ ಕಂದಕ ಏರ್ಪಟ್ಟಿದೆ. ದೇಶದ 20 ಯೋಧರು ಚೀನಾ ಸೈನಿಕರ ದಾಳಿಗೆ ಬಲಿಯಾಗಿದ್ದಾರೆ.
ಚೀನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದು ವಿಡಿಯೋ ಸಂವಾದ ನಡೆಸಿದರು. ಸಭೆಯಲ್ಲಿ ಕಾಂಗ್ರೆಸ್ ನಾಯಕಿ ನಮ್ಮನ್ನು ಕತ್ತಲಲ್ಲಿ ಇಡಲಾಗಿದೆ ಎಂದರು. ಬಹುತೇಕ ವಿಪಕ್ಷಗಳು, ಎನ್.ಡಿ.ಎ ಮೈತ್ರಿ ಪಕ್ಷಗಳು ಸರ್ಕಾರವನ್ನು ಬೆಂಬಲಿಸಿದವು. ಆದರೆ, ಕಡೆಯಲ್ಲಿ ಮಾತಾಡಿದ ಮೋದಿಯವರು, ಚೀನಾ ಭಾರತದ ಮೇಲೆ ದಾಳಿ ಮಾಡಿಲ್ಲ, ಯಾವುದೇ ಪ್ರದೇಶವನ್ನು ವಶಪಡಿಸಿಕೊಂಡಿಲ್ಲ ಎಂದು ಮೋದಿ ಹೇಳಿದ್ದರು.
ಇದನ್ನು ಖಂಡಿಸಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ನರೇಂದ್ರ ಮೋದಿ ವಾಸ್ತವವಾಗಿ ಸರೆಂಡರ್ (ಶರಣಾಗತ) ಮೋದಿ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ನಲ್ಲಿ Surrender Modi ಬದಲಾಗಿ Surender Modi ಎಂದು ಉಲ್ಲೇಖಿಸಲಾಗಿತ್ತು.
ಮೊದಲೇ ಕಾಲೆಳೆಯಲು ಕಾದು ಕುಳಿತಿದ್ದ ನರೇಂದ್ರ ಮೋದಿ ಅಭಿಮಾನಿಗಳು, ಅನುಯಾಯಿಗಳು ಇದನ್ನೇ ಮುಂದಿಟ್ಟುಕೊಂಡು ಟ್ರೋಲ್ ಮಾಡಿದ್ದಾರೆ. ಅಸಲಿಗೆ ನೀವು ಏನನ್ನು ಬರೆಯಬೇಕೆಂದಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published.

You May Also Like

24 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಯಾವ ಶಾಸಕರಿಗೆ ಯಾವ ನಿಗಮ?

ರಾಜ್ಯ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ. ವರ್ಷ ತುಂಬಿದ ಈ ಸಂದರ್ಭದಲ್ಲಿ ಸರ್ಕಾರ ವಿವಿಧ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿದೆ.

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ಇಂದು ದ್ವಿತಿಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು..?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ. 5,95,997…