ರಾಮನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕನಕಪುರ ಜನ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಹೀಗಾಗಿ ಇಂದಿನಿಂದ ಕನಕಪುರದಲ್ಲಿ ಸ್ವಯಂ ಪ್ರೇರಿತ ಲಾಕ್ಡೌನ್ ಘೋಷಿಸಲಾಗಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕನಕಪುರ ಲಾಕ್ಡೌರನ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜುಲೈ 1ರ ವರೆಗೂ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಗಿದೆ. 11 ಗಂಟೆಯ ನಂತರ ಕನಕಪುರ ಸಂಪೂರ್ಣ ಲಾಕ್ಡೌನ್ ಆಗಲಿದೆ. ಲಾಕ್ಡೌನನ್ ಆಗಿದ್ದ ವೇಳೆ ಜನರು ಓಡಾಟ ಕೂಡ ಮಾಡುವಂತಿಲ್ಲ.

ಹೀಗಾಗಿ ಇಂದು ಬೆಳಿಗ್ಗೆ ಅಗತ್ಯ ವಸ್ತುಗಳ ಖರೀದಿಗಾಗಿ ಜನ ಮುಗಿ ಬಿದ್ದಿದ್ದರು. ಕೆಲವು ಅಂಗಡಿಗಳನ್ನು ಮಾತ್ರ ತೆರೆಯಲಾಗಿತ್ತು. ಇನ್ನುಳಿದ ಅಂಗಡಿಗಳನ್ನು ಮುಚ್ಚಲಾಗಿತ್ತು. ಜನರು ಅಗತ್ಯ ವಸ್ಯಗಳನ್ನು ಖರೀದಿ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಟೀಕೆ ಮಾಡದಿರೆ ಮಾತ್ರ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಉಳಿಯುತ್ತಾರೆ: ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯ

ಹುರುಳಿಲ್ಲದಿದ್ದರೂ ಟೀಕೆ ಮಾಡುತ್ತಲೇ ಇರುವ ಡಿಕೆಶಿ ಅವರಿಗೆ ಟೀಕೆ ಮಾಡದಿದ್ದರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಪಟ್ಟದಿಂದ ಕಿತ್ತೊಗೆಯುತ್ತಾರೆ ಎಂಬ ಭೀತಿ ಆವರಿಸಿಕೊಂಡಿದೆ ಎಂದು ವ್ಯಂಗ್ಯವಾಡಿದರು.

ನರೆಗಲ್ಲ: ಅತೀಯಾದ ಮಳೆಯಿಂದ ಕೊಳೆಯುತ್ತಿದೆ ಈರುಳ್ಳಿ

ಹೋಬಳಿಯ ಎಲ್ಲೇಡೆ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗೆ ತಿವ್ರ ಹಿನ್ನೆಡೆಯಾಗಿದೆ.

ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ

ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.