ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿದರು. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ, ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕೆಂದು ಸಿಎಂ ಅಧಿಕಾರಿಗಳಿಗೆ ಆದೇಶಿಸಿದರು.

ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ. ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೂಡ ಸಿಎಂ ಸೂಚಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು. ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸೂಚಿಸಿದರು.

ಬೆಂಗಳೂರು ನಗರದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಕೋವಿಡ್ 19 ಹೆಚ್ಚಾಗದಂತೆ ನೋಡಿಕೊಳ್ಳಬೇಕು. ವಾರ್ ರೂಂ ನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.  ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭವಾಗಿದ್ದು, ಈ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಕೋವಿಡ್ 19 ನಿಯಂತ್ರಿಸುವುದು ನಮ್ಮ ಕರ್ತವ್ಯ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕ್ವಾರಂಟೈನ್ ಉಲ್ಲಂಘನೆ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನೊಳಗೊಂಡ ತಂಡಗಳು ಕಾರ್ಯನಿರ್ವಹಿಸುತ್ತಿವೆ ಈ ವೇಳೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ-ಬೆಟಗೇರಿ ನಗರಸಭೆ: ಮಾರ್ಚ 2ಕ್ಕೆ ಅಧ್ಯಕ್ಷ ಸ್ಥಾನದ ತೀರ್ಪು ಸಾಧ್ಯತೆ, ಉಪಾಧ್ಯಕ್ಷ ಸ್ಥಾನಕ್ಕೆ ಹೈ ಕೋರ್ಟ ಗ್ರೀನ್ ಸಿಗ್ನಲ್

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು…

24 ಗಂಟೆಗಳಲ್ಲಿ ರಾಜ್ಯದಲ್ಲಿ 37 ಕೋವಿಡ್ ಪಾಸಿಟಿವ್

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.

ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿ: ಡಾ.ಬಸವಲಿಂಗ ಸ್ವಾಮೀಜಿ

ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾದುದು. ಎಲ್ಲರ ಬದುಕಿಗೆ ಅನುಗುಣವಾದ ಪರಂಪರೆ ಇದು. ಈ ನಿಟ್ಟಿನಲ್ಲಿ ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ

ಹಾವು ರಕ್ಷಕ ಡ್ಯಾನಿಯಲ್ ಗೆ ಕಚ್ವಿದ ಹಾವು: ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ನಗರದ ಉರಗ ಪ್ರೇಮಿ ಹಾಗೂ ಹಾವು ರಕ್ಷಕ ಡ್ಯಾನಿಯಲ್ ನ್ಯೂಟನ್ ನಿಗೆ ಹಾವು ಕಚ್ಚಿದ್ದು…