ನವದೆಹಲಿ : ಚೀನಾ ಸಂಘರ್ಷದ ಕುರಿತು ಮಾತನಾಡಿರುವ ಪ್ರಧಾನಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತಮ್ಮ ಸ್ಥಾನದ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ. ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ವೀರ ಮರಣ ಹೊಂದಿದ ಸೈನಿಕರಿಗೆ ನ್ಯಾಯ ದೊರಕಿಸಿಕೊಡುವಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದಾರೆ.
ಈ ವಿಷಯದಲ್ಲಿ ಏನೂ ಕ್ರಮ ಕೈಗೊಳ್ಳದಿದ್ದರೆ ಅಥವಾ ಅನ್ಯಾಯ ಮಾಡಿದರೆ ದೇಶದ ಜನರ ನಂಬಿಕೆಗೆ ದ್ರೋಹವೆಸಗಿದಂತೆ ಎಂದು ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಪ್ರಸ್ತಾಪಿಸಿದ್ದಾರೆ.