ಬೆಂಗಳೂರು : ನಗರದಲ್ಲಿ ಮಹಾಮಾರಿಯ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಹೆಚ್ಚಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ನಗರದ ಬಹುತೇಕ ಏರಿಯಾಗಳು ಸೀಲ್ಡೌಗನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ.
ಇಂದು ಸಿಎಂ ಜೊತೆ ಈ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಒಂದು ವೇಳೆ ಹೀಗೆ ನಗರದಲ್ಲಿ ಸಡಲಿಕೆ ಮುಂದುವರಿಸಿದರೆ ಕೊರೊನಾ ನಿಯಂತ್ರಣ ಅಸಾಧ್ಯ ಎಂದಿದ್ದಾರೆ. ನಗರದ ಸುಮಾರು 7 ಏರಿಯಾಗಳು ಕಂಪ್ಲೀಟ್ ಸೀಲ್ಡೌುನ್ ಮಾಡುವ ಸಾಧ್ಯತೆ ಇದೆ. ಚಾಮರಾಜಪೇಟೆ, ಚಿಕ್ಕಪೇಟೆ, ಕಲಾಸಿಪಾಳ್ಯ ಸೇರಿದಂತೆ ಹಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ನಗರದಲ್ಲಿ ಕೊರೊನಾ ಹೆಚ್ಚಾಗಲು ಸಡಲಿಕೆಯೇ ಕಾರಣ ಎನ್ನಲಾಗಿದೆ. ಜೊತೆಗೆ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮಾಡದಿರುವುದು ಕೂಡ ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾಗಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ಜೊತೆ ಸಭೆ ಮುಗಿಸಿದ ಬಳಿಕ ಬಹುತೇಕ ಇಂದೇ ಆಯ್ದ ಏರಿಯಾಗಳು ಸೀಲ್ಡೌಲನ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಗರದಲ್ಲಿ ಮತ್ತೆ ಹಲವು ಪ್ರದೇಶಗಳು ಸೀಲ್ ಡೌನ್ ಪಟ್ಟಿಗೆ!

corona state update