ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಈ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತ್ರಿಪುರಾಂತ್ ಎಂಬಲ್ಲಿ ನಡೆದಿದೆ. ಅಶ್ವಿನ್ ಮೆಟ್ರೆ (26) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವ್ಯಕ್ತಿ ಕೊರೊನಾ ಟೆಸ್ಟ್ ವರದಿ ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ವ್ಯಕ್ತಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಹೊಂದಿದ್ದ. ಈ ವ್ಯಕ್ತಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಗಂಟಲಿನ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಕೈಗೆ ಬರುವ ಮುನ್ನವೇ ತಮಗೆ ಕೊರೋನಾ ಇದೆ ಎಂದು ಭಯಗೊಂಡ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮತ್ತೆ 10 ಕಂಟೇನ್ ಮೆಂಟ್ ಪ್ರದೇಶಗಳ ಘೋಷಣೆ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 10ರಂದು 10 ಪ್ರತಿಬಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಘೋಷಿಸಿದ್ದಾರೆ.

ಬೀಜ, ಗೊಬ್ಬರ ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಮ : ಸಚಿವ ಸಿ.ಸಿ.ಪಾಟೀಲ್

ಈಗಾಗಲೇ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಉತ್ತಮ ಮುಂಗಾರಿನ ನಿರೀಕ್ಷೆ ಇದೆ. ಕಳ್ಳ ಸಂತೆಯಲ್ಲಿ ಬೀಜ ಗೊಬ್ಬರ ಮಾರಾಟ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು

ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಭಾರತ: 7 ಲಕ್ಷ ದಾಟಿದ ಪಾಸಿಟಿವ್

ನವದೆಹಲಿ: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದ ನಡುವಿನ 24 ಗಂಟೆಗಳಲ್ಲಿ 24,448 ಕೇಸುಗಳು ದಾಳಲಾಗುವ ಮೂಲಕ…