ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ ಪರಿಚಯವಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಸಾರಿಗೆ ಸಂಸ್ಥೆಯ ಬಸ್ ಚಾಲಕನಲ್ಲಿ ಸೋಂಕು ದೃಢಪಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನ ಹೊರ ದೇಶ ಹಾಗೂ ರಾಜ್ಯದಿಂದ ಬಂದವರಲ್ಲಿ ಕೊರೊನಾ ಕಂಡು ಬಂದಿತ್ತು. ಸದ್ಯ ಅಂತರ್ ಜಿಲ್ಲಾ ಸಂಚಾರ ಮಾಡಿದ ವ್ಯಕ್ತಿಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಜನರು ಆತಂಕದಲ್ಲಿ ದಿನ ಕಳೆಯುವಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಸಾರಿಗೆ ಸಂಸ್ಥೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದ ನಿರ್ವಾಹಕನಿಗೆ ಕೊರೊನಾ ಸೋಂಕು ದೃಢವಾಗಿದೆ. ಈತನ ಸಂಪರ್ಕದಲ್ಲಿದ್ದ ಸಹೋದ್ಯೋಗಿಗಳು, ಸ್ನೇಹಿತರು ಜೊತೆಗೆ ಬಸ್ಸಿನಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಗೂ ಈಗ ಆತಂಕ ಶುರುವಾಗಿದೆ.

ಜೂ. 11ರಂದು ಯಲ್ಲಾಪುರದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ದು, ಬಳಿಕ ಜೂ.13ಕ್ಕೆ ವಾಪಸ್ಸಾಗಿದ್ದ, ಇವರಿಗೆ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಹೀಗಾಗಿ ಕಂಡಕ್ಟರಿಗೆ ಕ್ವಾರಂಟೈನ್ ವಿಧಿಸಲಾಗಿತ್ತು. ಜೂ.16ಕ್ಕೆ ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದ ಇವರ ಗಂಟಲು ದ್ರವವನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಕೇಂದ್ರ ಸರ್ಕಾರದ ದುರಾಡಳಿತದಿಂದ ನಿರುದ್ಯೋಗ ಸಮಸ್ಯೆ ಹೆಚ್ಚಳ: ಜಿ.ಎಸ್.ಪಾಟೀಲ್

೨೩ಜಿಜೆಡಿ೪: ಗಜೇಂದ್ರಗಡ ಪಟ್ಟಣದ ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪನವರ ಪರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಮತಯಾಚಿಸಿ, ಮಾತನಾಡಿದರು.

ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು

ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.

ILI ಲಕ್ಷಣ ವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ- ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಹರ್ತಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ…