ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

corona

corona state update

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ ಪರಿಚಯವಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಸಾರಿಗೆ ಸಂಸ್ಥೆಯ ಬಸ್ ಚಾಲಕನಲ್ಲಿ ಸೋಂಕು ದೃಢಪಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನ ಹೊರ ದೇಶ ಹಾಗೂ ರಾಜ್ಯದಿಂದ ಬಂದವರಲ್ಲಿ ಕೊರೊನಾ ಕಂಡು ಬಂದಿತ್ತು. ಸದ್ಯ ಅಂತರ್ ಜಿಲ್ಲಾ ಸಂಚಾರ ಮಾಡಿದ ವ್ಯಕ್ತಿಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಜನರು ಆತಂಕದಲ್ಲಿ ದಿನ ಕಳೆಯುವಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಸಾರಿಗೆ ಸಂಸ್ಥೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದ ನಿರ್ವಾಹಕನಿಗೆ ಕೊರೊನಾ ಸೋಂಕು ದೃಢವಾಗಿದೆ. ಈತನ ಸಂಪರ್ಕದಲ್ಲಿದ್ದ ಸಹೋದ್ಯೋಗಿಗಳು, ಸ್ನೇಹಿತರು ಜೊತೆಗೆ ಬಸ್ಸಿನಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಗೂ ಈಗ ಆತಂಕ ಶುರುವಾಗಿದೆ.

ಜೂ. 11ರಂದು ಯಲ್ಲಾಪುರದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ದು, ಬಳಿಕ ಜೂ.13ಕ್ಕೆ ವಾಪಸ್ಸಾಗಿದ್ದ, ಇವರಿಗೆ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಹೀಗಾಗಿ ಕಂಡಕ್ಟರಿಗೆ ಕ್ವಾರಂಟೈನ್ ವಿಧಿಸಲಾಗಿತ್ತು. ಜೂ.16ಕ್ಕೆ ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದ ಇವರ ಗಂಟಲು ದ್ರವವನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

Exit mobile version