ವಾಷಿಂಗ್ಟನ್‌: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಚ್‌-1ಬಿ, ಎಲ್‌-1 ವೀಸಾ ಮತ್ತು ಇತರೆ ತಾತ್ಕಾಲಿಕ ಕೆಲಸಗಳ ಪರವಾನಿಗೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಭಾರತೀಯ ಐಟಿ ವೃತ್ತಿಪರರಿಗೆ ಅನುಕೂಲವಾಗುತ್ತಿದ್ದ ಎಚ್ -1 ಬಿ ಮತ್ತು ಎಲ್ 1 ಸೇರಿದಂತೆ ವಿದೇಶಿ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಹೀಗಾಗಿ ಅಮೆರಿಕದಲ್ಲಿ 5,25,000 ಉದ್ಯೋಗಗಳು ಮುಕ್ತವಾಗಲಿವೆ ಎಂದು ಶ್ವೇತ ಭವನದ ಅಧಿಕಾರಿ ತಿಳಿಸಿದ್ದಾರೆ. 2020 ರ ಅವಧಿಯಲ್ಲಿ ಅಮೆಕನ್ನರಿಗೆ ಉದ್ಯೋಗ ಮುಕ್ತಗೊಳಿಸುವ ಉದ್ಧೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ಅಮೆರಿಕನ್ನರಿಗೆ ಸುಮಾರು 5.25 ಲಕ್ಷ ಉದ್ಯೋಗಗಳು ಕೈಗೆ ಸಿಗಲಿವೆ.

ಕೊರೊನಾ ಹಾವಳಿಯಿಂದಾಗಿ ಅಮೆರಿಕ ಕೂಡ ಎಲ್ಲ ರಾಷ್ಟ್ರಗಳಂತೆ ಆರ್ಥಿಕ ಸಮಸ್ಯೆಯಿಂದ ನಲುಗುತ್ತಿದೆ. ಹೀಗಾಗಿ ಇಷ್ಟು ಬೃಹತ್ ಸಂಖ್ಯೆ ಉದ್ಯೋಗಗಳನ್ನು ಅಮೆರಿಕನ್ನರಿಗೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರಂಪ್ ಅವರ ಘೋಷಣೆ ಪ್ರಕಾರ H-1B, H-4, H-2B ವೀಸಾ, ಜೆ ಮತ್ತು ಎಲ್ ವೀಸಾಗಳು ಸೇರಿದಂತೆ ಹಲವಾರು ಜನಪ್ರಿಯ ವಲಸೆರಹಿತ ವೀಸಾಗಳನ್ನು ಪ್ರಸಕ್ತ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಒಂದೇ ದಿನ ದೇಶದಲ್ಲಿ ಎಷ್ಟು ಜನರಿಗೆ ಸೋಂಕು ಮೆತ್ತಿಕೊಂಡಿದೆ ಗೊತ್ತಾ?

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,871 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಡ್ರಗ್ಸ್ ಮಾಫಿಯಾ – ವಿಚಾರಣೆಗೆ ಹಾಜರಾದ ನಿರೂಪಕಿ ಅನುಶ್ರೀ!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಹಾಗೂ ಕಿರುತೆರೆ ನಟಿ ಅನುಶ್ರೀ ಅವರು ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.