ಬೆಂಗಳೂರು: ರಾಜ್ಯದಾದ್ಯಂತ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಕೊರೊನಾದಿಂದಾಗಿ ಇಲ್ಲಿಯವರೆಗೂ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ, ಸರ್ಕಾರ ಜೂ. 25ರಿಂದ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ಸರ್ಕಾರ ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ. ಆದರೆ, ಈ ಸಮಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಬೇಕೆ ಅಥವಾ ಬೇಡವೇ ಎಂಬ ಕುರಿತು ಚರ್ಚೆಗಳು ಕೂಡ ನಡೆಯುತ್ತಿವೆ. ಆದರೆ, ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದು ಸೂಚನೆ ಕೊಟ್ಟಿದ್ದಾರೆ.