ಗದಗ: ನಗರದ ಗದಗ-ಬೆಟಗೇರಿ ನಗರಸಭೆಯ ವಾರ್ಡ ನಂ. 01 ಎಸ್.ಎಮ್. ಕೃಷ್ಣಾ ನಗರದ ಭಾಗಗಳ 100 ಮೀ ಪ್ರದೇಶವನ್ನು ನಿಯಂತ್ರಿತ ( ಕಂಟೇನ್ಮೆಂಟ) ಪ್ರದೇಶವೆಂದು ಮತ್ತು ಪ್ರದೇಶದ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ  ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ  ಗದಗ ಬೆಟಗೇರಿ ನಗರಸಭೆಯ ಕಿರಿಯ ಅಭಿಯಂತರ ಎಚ್.ಎ. ಬಂಡಿವಡ್ಡರ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.  

ರೋಣ ತಾಲೂಕಿನ ಕುರಡಗಿ ಗ್ರಾಮದ ವಾರ್ಡ ನಂ. 2 ರ ಭಾಗಗಳ 100 ಮೀಟರ್ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಎಂದು  ಮತ್ತು  ಆ ಪ್ರದೇಶದ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ರೋಣ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷಕುಮಾರ್ ಪಾಟೀಲ ಅವರನ್ನು  ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.  

ಶಿರಹಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ ನಂ. 06, ಮಟ್ಟಿಭಾವಿ ಪ್ಲಾಟ್, ಆಝಾದ್ ಕಾಲೋನಿ ಭಾಗದ 100 ಮೀಟರ್ ಸುತ್ತಲಿನ ವ್ಯಾಪ್ತಿಯನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ  ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಬಫರ್ ಝೋನ್ ಎಂದು ಘೋಷಿಸಿ ಶಿರಹಟ್ಟಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.

ಶಿರಹಟ್ಟಿ ತಾಲೂಕಿನ ಮಜ್ಜೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಾರ್ಡ ನಂ.1 ಶಿವಾಜಿನಗರ ಭಾಗದ 100 ಮೀಟರ್ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ ವ್ಯಾಪ್ತಿಯ ಸುತ್ತಳತೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ  ಶಿರಹಟ್ಟಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಓಲೇಕಾರ್ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.  

ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ನಿಯಂತ್ರಿತ ಪ್ರದೇಶಕ್ಕೆ  ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. ಬಫರ್ ಝೋನ್‍ನ ಮೊದಲ ಒಂದು ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ಬಫರ್‍ಝೋನ್ ಇರಲಿದ್ದು ಅಲ್ಲಿ ಪ್ರತಿ ಮನೆ ಮನೆಗಳಲ್ಲೂ ಆರೋಗ್ಯ  ತಪಾಸಣೆ ನಡೆಸಲಾಗುವುದು. ನಿಯಂತ್ರಿತ ವಲಯಗಳಲ್ಲಿ ಎಲ್ಲ ದಿನಸಿ ಅಂಗಡಿಗಳು, ಹಾಲಿನ ಅಂಗಡಿಗಳು, ಮಾಂಸ, ಔಷಧ ಸೇರಿದಂತೆ ಎಲ್ಲ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡುವುದು. ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ಮಿಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಅಗತ್ಯ ವಸ್ತುಗಳ ಪೂರೈಕೆಯನ್ನು ಸಂಬಂಧಿತ ಇಲಾಖೆಗಳ ಮೂಲಕವೇ ಪಡೆಯಬೇಕು. ಖಾಸಗಿ ಮೂಲಗಳಿಗೆ ಅವಕಾಶವಿಲ್ಲ, ಈ ಪ್ರದೇಶಗಳ ಜನರು ಮನೆ ಬಿಟ್ಟು ಹೊರಗೆ ತಿರುಗುವುದನ್ನು ನಿಷೇಧಿಸಲಾಗಿದೆ. ಈ ಪ್ರದೇಶಗಳ ಎಲ್ಲ ಶಾಲಾ, ಕಾಲೇಜು, ಕಚೇರಿಗಳನ್ನು ಮುಚ್ಚಲು, ಜನಗುಂಪು ಸೇರುವಿಕೆ, ಕರ್ತವ್ಯ ನಿರತ ವಾಹನ ಹೊರತುಪಡಿಸಿ ವಾಹನ ಸಂಚಾರವನ್ನು ನಿರ್ಭಂಧಿಸಿದೆ. ನಿಯಂತ್ರಿತ ವಲಯ ಎಂದು ಘೋಷಣೆ ಮಾಡಿದ 28  ದಿನಗಳ ಒಳಗೆ ಅಲ್ಲಿ ಯಾವುದೇ ಹೊಸ ಕೋವಿಡ್-19 ಪ್ರಕರಣ ವರದಿಯಾಗದೇ ಇದ್ದಲ್ಲಿ ಅಥವಾ ಆ ನಿಯಂತ್ರಿತ ವಲಯದಲ್ಲಿ ಹತ್ತಕ್ಕಿಂತ ಕಡಿಮೆ ಸಂಪರ್ಕಗಳು/ ಗೃಹ ದಿಗ್ಬಂಧನದಲ್ಲಿ ಸಕ್ರಿಯವಾಗಿದ್ದರೆ ಆಗ ಆ ನಿಯಂತ್ರಿತ ವಲಯವು ಸಾಮಾನ್ಯ ವಲಯವಾಗಿ ಮತ್ತು ಬಫರ್ ಝೋನ್ ಸಾಮಾನ್ಯ ವಲಯವಾಗಿ ಬದಲಾಗುತ್ತದೆ ಎಂದು ಗದಗ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿರುತ್ತಾರೆ.    

ಕಂಟೈನ್‍ಮೆಂಟ್, ಬಫರ್ ಝೋನ್ ಮತ್ತು ಕ್ಲಸ್ಟರ್‍ಗಳಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ ಕುರಿತು ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಹಾಗೂ ಇಲಾಖೆಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಜಿಲ್ಲಾಧಿಕಾರಿಗಳು ಕರ್ತವ್ಯಗಳನ್ನು ನಿಗದಿಪಡಿಸಿರುತ್ತಾರೆ. ಈ ಆದೇಶವನ್ನು ಉಲ್ಲಂಘಿಸಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ- 2005 ರನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ನಿರ್ದೇಶಿಸಲಾಗಿದೆ.    


Leave a Reply

Your email address will not be published. Required fields are marked *

You May Also Like

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ

ಜಿಲ್ಲೆಯಲ್ಲಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಭವನವನ್ನು ರಾಜ್ಯದಲ್ಲಿಯೇ ಮಾದರಿ ಭವನವಾಗಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶರಣು ಗೋಗೇರಿ ಹೇಳಿದರು.

ಲಕ್ಕಲಕಟ್ಟಿಯಲ್ಲಿ ವಿದ್ಯುತ್ ಸ್ಪರ್ಷ: ಯುವಕ ಸಾವು

ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ನಿಮಿತ್ಯ ತೇರಿನ ಗಾಲಿ ಪೂಜಾ ಕಾರ್ಯಕ್ರಮ

ಉತ್ತರಪ್ರಭ ಗದಗ:ಉತ್ತರ ಕರ್ನಾಟಕದಲ್ಲಿ ಐತಿಹಾಸಿಕ ಮತ್ತು ಪುರಾತನವಾದ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ…

150ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ನೆರವು ನೀಡಿದ್ದೇವೆ: ಪ್ರಧಾನಿ ಮೋದಿ

ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ…