ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಜಾಪುರ ಜಿಲ್ಲೆಯಿಂದ ಜೂನ್ 20 ರಂದು ಲಕ್ಷ್ಮೇಶ್ವರ ಪಟ್ಟಣಕ್ಕೆ ಆಗಮಿಸಿದ್ದ ವಿದ್ಯಾರ್ಥಿ ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಿತ್ತು. ಈಗಾಗಲೇ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ವಿದ್ಯಾರ್ಥಿ ಜೊತೆ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳ ಟೆಸ್ಟ್ ಕೂಡ ಜಿಲ್ಲಾಡಳಿತ ಕಳುಹಿಸಿದೆ ಎನ್ನಲಾಗಿದೆ. ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆ ವಿದ್ಯಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡಿಲ್ಲ.