ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!


ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ 31ರ ವರೆಗೆ ಲಾಕ್ ಡೌನ್ ಘೋಷಿಸಿದೆ.
ಈ ಸಂದರ್ಭದಲ್ಲಿ ಹಲವು ವಿನಾಯಿತಿಗಳನ್ನು ಘೋಷಿಸಲಾಗಿದೆ. ಶೀಘ್ರದಲ್ಲಿಯೇ ಲಾಕ್ಡೌ್ನ್ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ದೇಶದಲ್ಲಿ ಲಾಕ್ಡೌಸನ್ ಬೇಕು ಅಥವಾ ಬೇಡ ಎಂಬುದರ ಕುರಿತ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ ಪಶ್ಚಿಮ ಬಂಗಾಳ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ದೇಶದಲ್ಲಿ ಇದುವರೆಗೂ 4,56,183 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,83,022 ಸಕ್ರಿಯ ಕೇಸ್ ಗಳಿವೆ. ಭಾರತದಲ್ಲಿ ಡೆಡ್ಲಿ ವೈರಸ್ ಆಕ್ರಮಣಕ್ಕೆ ಒಟ್ಟು 14,476 ಜನ ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಕರ್ನಾಟಕದಲ್ಲಿ ಕೊರೊನಾ 10 ಸಾವಿರದ ಗಡಿ ದಾಟಿದ್ದು, 164 ಜನರು ಸಾವನ್ನಪ್ಪಿದ್ದಾರೆ.

Exit mobile version