ಮುಂಡರಗಿ: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ. ಸಿದ್ದಪ್ಪ , ಈರಣ್ಣ ಹಾಗೂ ಮೈಲಾರಿ ಅಪಘಾತಕ್ಕೀಡಾದ ವಿದ್ಯಾರ್ಥಿಗಳು.
ಕಲಕೇರಿ‌ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ಬೈಕ್ ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬೆಳ್ಳಟ್ಟಿಯಿಂದ ಮುಂಡರಗಿ ಮಾರ್ಗವಾಗಿ ಬರುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೂ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ಗೆ ಕಳಿಸಲಾಗಿದೆ. ಮುಂಡರಗಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಶಾಲಾ ಕಾಲೇಜುಗಳಿಗೆ 12 ರಿಂದ 16ರ ವರೆಗೆ ರಾಜ್ಯ ಸರ್ಕಾರ ರಜೆ ಘೋಷಣೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ದಿನಾಂಕ:08.02.2022 ರ ಸುತ್ತೋಲೆಯನ್ನು ಮುಂದುವರೆಸುತ್ತಾ,…

ಬಿಂಕದಕಟ್ಟಿ ಮೃಗಾಲಯದಲ್ಲಿ ಧರ್ಮಾರ್ಜುನರ ಘರ್ಜನೆ

ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ.

ಗದಗ, ನರಗುಂದ, ರೋಣ, ಮುಂಡರಗಿ ತಾಲೂಕಿನಲ್ಲಿಂದು ಸೋಂಕಿರು ಪತ್ತೆ

ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ(ಪಿ-23121)…

ಲಾಕ್ ಡೌನ್ ನಲ್ಲೂ ನಿಮಗೆ ಬರ್ತಡೇ ಆಚರಣೆ ಬೇಕಿತ್ತಾ ಸಿಪಿಐ ಸಾಹೇಬರೇ??

ದೇಶದಲ್ಲಿ ಲಾಕ್ ಡೌನ್ ಇದ್ದಾಗಲೂ ನಮ್ಮ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ್ ಸಗರಿ ಲಾಕ್ ಡೌನ್ ಮದ್ಯದಲ್ಲೂ ಜನರ ಗುಂಪಿನ ಮದ್ಯೆ ನಿಂತು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ಜಿಲ್ಲೆಯಲ್ಲೀಗ ಜನ ಮಾತಾಡಿಕೊಳ್ಳುತ್ತಿದ್ದಾರೆ.