ಬೈಕ್ ಗೆ ಲಾರಿ ಡಿಕ್ಕಿ: ಎಸ್.ಎಸ್.ಎಲ್.ಸಿ 3 ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ಮುಂಡರಗಿ: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ. ಸಿದ್ದಪ್ಪ , ಈರಣ್ಣ ಹಾಗೂ ಮೈಲಾರಿ ಅಪಘಾತಕ್ಕೀಡಾದ ವಿದ್ಯಾರ್ಥಿಗಳು.
ಕಲಕೇರಿ‌ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ಬೈಕ್ ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬೆಳ್ಳಟ್ಟಿಯಿಂದ ಮುಂಡರಗಿ ಮಾರ್ಗವಾಗಿ ಬರುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೂ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ಗೆ ಕಳಿಸಲಾಗಿದೆ. ಮುಂಡರಗಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version