ತನ್ನ ದಾಖಲೆ ತಾನೇ ಮುರಿದು ಆತಂಕ ಸೃಷ್ಟಿಸುತ್ತಿರುವ ಮಹಾಮಾರಿ

ಬೆಂಗಳೂರು : ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿದೆ. ನಿನ್ನೆ ಒಂದೇ ದಿನ ಗರಿಷ್ಠ ಸೋಂಕಿತರು ದೇಶದಲ್ಲಿ ಪತ್ತೆಯಾಗಿದ್ದಾರೆ. 

ನಿನ್ನೆ ಒಂದೇ ದಿನ ದೇಶದಲ್ಲಿ 16,868 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 4.72 ಲಕ್ಷಕ್ಕೆ ಏರಿಕೆ ಕಂಡಿದೆ. ಈ ಪೈಕಿ 2,71,688 ಜನ ಗುಣಮುಖರಾಗಿದ್ದಾರೆ. 14,907 ಜನ ಸಾವನ್ನಪ್ಪಿದ್ದಾರೆ. ಸೋಂಕಿತರ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿದೆ.

ಇನ್ನು ವಿಶ್ವದಲ್ಲಿ ಈ ಮಹಾಮಾರಿ ಇಲ್ಲಿಯವರೆಗೆ 4.84 ಲಕ್ಷ ಜನರನ್ನು ಬಲಿ ಪಡೆದಿದೆ. 95.27 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 51.75 ಲಕ್ಷ ಜನರು ಆರೋಗ್ಯವಾಗಿದ್ದಾರೆ. ಅಮೆರಿಕದಲ್ಲಿ ಅತೀ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 24.62 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 1.24 ಲಕ್ಷ ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಅಮೆರಿಕ ಮೊದಲನೇ ಸ್ಠಾನದಲ್ಲಿದೆ.

ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 11.92 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣ ಬೆಳಕಿಗೆ ಬಂದಿವೆ. ಇಲ್ಲಿ 53 ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಮೃತಪ ಪಟ್ಟಿಯಲ್ಲಿ ಕೂಡ ಬ್ರೆಜಿಲ್ 2ನೇ ಸ್ಥಾನದಲ್ಲಿದೆ. ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. 6.06 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿ 8500ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 

ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ 3.06 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 43 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ.

Exit mobile version