ಗದಗ: ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ದಾಳಿಂಬೆ ಮತ್ತು ಪಪ್ಪಾಯ (ಪರಂಗಿ)  ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ಬಜಾಜ್ ಅಲೆನ್ಸ್ ಇನ್ಸೂರೆನ್ಸ ಕಂಪನಿ ವಿಮೆ ನೀಡಲಿದೆ.
ದಾಳಿಂಬೆ ಮತ್ತು ಪಪ್ಪಾಯ (ಪರಂಗಿ) ಬೆಳೆಗೆ ವಿಮೆ ಕಂತು ಪಾವತಿಗೆ ಜೂನ್ 30 ಕೊನೆಯ ದಿನವಾಗಿದೆ. ರೈತರು ಸ್ವಯಂ ದೃಢೀಕರಣ, ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ ಕಾರ್ಡ ಸೇರಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಅಥವಾ ತೋಟಗಾರಿಕೆ ಮಾಹಿತಿ ಹಾಗೂ ಸಲಹಾ ಕೇಂದ್ರ ಗದಗಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದೆಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಎಪಿಎಂಸಿ ಚೆಕ್‌ಪೊಸ್ಟ್ ನಲ್ಲಿ ಹಣ ವಸೂಲಿ ದಂಧೆ?

ಎಪಿಎಂಸಿ ಚೆಕ್‌ಪೊಸ್ಟ್ನಲ್ಲಿ ವಾಹನ ತಪಾಸಣೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕೊರೊನಾದಿಂದಾಗಿ ಸಪ್ತಪದಿ ಸಮಯ ಬದಲಿಸಿದ ಸರ್ಕಾರ!

ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.

ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯ ಅಂಧಾ ದರ್ಬಾರ್…!

ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರೆ ಮರಳು ಗಣಿಗಾರಿಕೆಗೆ ಸಿಲುಕಿ ನರಳುವಂತಾಗಿದೆ. ನಿತ್ಯ ಲೆಕ್ಕವಿಲ್ಲದಷ್ಟು ತುಂಗಭದ್ರೆಯ ಒಡಲು ಬಗೆಯುತ್ತಿದ್ದರೂ ತುಂಗವ್ವಾ ಮರಳು ಗಣಿಗಳ್ಳರ ದಾಯಕ್ಕೆ ಅಸಹಾಯಕಳಾಗಿ ಮೈಯೊಡ್ಡಿದ್ದಾಳೆ.