ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ ಲಾಕ್ಡೌರನ್ ಘೋಷಣೆ ಮಾಡಿಕೊಳ್ಳಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಲಾಕ್ಡೌ್ನ್ಗೆೊ ಜಿಲ್ಲಾಡಳಿತ ತೀರ್ಮಾನಿಸಿದೆ. ಮೊದಲ ಆಷಾಡ ಶುಕ್ರವಾರವಾದರೂ ಕೊರೊನಾ ಭಯಕ್ಕೆ ಚಾಮುಂಡೇಶ್ವರಿ ದೇಗುಲು ತೆರೆಯುತ್ತಿಲ್ಲ. ಮೈಸೂರಿನ ಬೇರೆ ಯಾವುದೇ ದೇವಾಲಯಗಳು ಕೂಡ ಮೂರು ದಿನ ದರ್ಶನಕ್ಕೆ ಲಭ್ಯ ಇಲ್ಲ ಎನ್ನಲಾಗಿದೆ.

ಜೊತೆಗೆ ಶನಿವಾರ ಹಾಗೂ ಭಾನುವಾರ ಮೈಸೂರು ಅರಮನೆ ಹಾಗೂ ಮೃಗಾಲಯ ಬಂದ್ಗೆಲ ಪಾಲಿಕೆ ಆದೇಶಿಸಿದೆ. ಪ್ರಮುಖ 5 ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಸಂತೇಪೇಟೆ, ಶಿವರಾಂಪೇಟೆ, ಮನ್ನಾರ್ಸ್ ಮಾರ್ಕೆಟ್ ಮತ್ತು ಬೋಟಿ ಬಜಾರ್ ಗುರುವಾರದಿಂದ ನಾಲ್ಕು ದಿನ ಬಂದ್ ಮಾಡಲಾಗಿದೆ.

ಧಾರವಾಡ ಜಿಲ್ಲೆಯ ಮೊರಬ ಗ್ರಾಮದಲ್ಲಿ 40ಕ್ಕೂ ಹೆಚ್ಚು ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಗ್ರಾಮದಿಂದ ಯಾರೂ ಹೊರಗೆ ಹೋಗುವಂತಿಲ್ಲ. ಗ್ರಾಮಕ್ಕೆ ಹೊರಗಿನವರು ಯಾರೂ ಒಳಗೆ ಬರುವಂತಿಲ್ಲ. ಕೊಡಗಿನಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗುರುವಾರದಿಂದ 21 ದಿನ ಹೋಂ ಸ್ಟೇ, ರೆಸಾರ್ಟ್, ಹೊಟೇಲ್ಗಗಳನ್ನು ಬಂದ್ ಮಾಡಲಾಗಿದೆ.

ದಾವಣಗೆರೆಯ ಚನ್ನಗಿರಿ ಹಾಗೂ ಹರಿಹರದಲ್ಲಿ ಸ್ಥಳೀಯ ಶಾಸಕರು, ಸಂಘ-ಸಂಸ್ಥೆಯವರು, ವಿವಿಧ ಪಕ್ಷದ ಮುಖಂಡರು ಸೇರಿ ಸ್ವಯಂ ಪ್ರೇರಿತವಾಗಿ ಲಾಕ್ಡೌ್ನ್ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ವ್ಯಾಪಾರಸ್ಥರೇ ಸ್ವಯಂಪ್ರೇರಿತವಾಗಿ ವ್ಯಾಪಾರ ವಹಿವಾಟಿಗೆ ಸಮಯ ನಿಗದಿ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಜೂನ್ 30ರ ವರೆಗೆ ಹೊಟೇಲ್ಗ ಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ರಾಮನಗರ ಜಿಲ್ಲೆಯ ಕನಕಪುರ, ಮಾಗಡಿ ಹಾಗೂ ರಾಮನಗರ ಪಟ್ಟಣಗಳಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್ಡೌವನ್ ಘೋಷಿಸಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 11ರ ವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶ ನೀಡಲಾಗಿದೆ. ಆ ನಂತರ ಲಾಕ್ ಡೌನ್ ಮಾಡಲಾಗುತ್ತಿದೆ ಅಗತ್ಯ, ತುರ್ತು ಸೇವೆ ಹೊರೆತುಪಡಿಸಿ ಎಲ್ಲವನ್ನು ಜಿಲ್ಲಾಡಳಿತ ಬಂದ್ ಮಾಡಿದೆ.

Leave a Reply

Your email address will not be published.

You May Also Like

ನಮ್ಮ ಸಂಸ್ಕೃತಿ ಅನುಸರಿಸಿ : ಪ್ರಹ್ಲಾದ ಹೊಸಳ್ಳಿ

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ದೇಶದ ಧರ್ಮ, ಸಂಸ್ಕೃತಿಯನ್ನು ಅನುಸರಿಸಿ, ಯುವ ಜನತೆ ಒಕ್ಕಟ್ಟಿನಿಂದ ಸಮಾಜಕ್ಕೆ ಗೌರವ ತರುವಂತಹ ಕಾರ್ಯಚಟುವಟಿಕೆಗಳನ್ನು ಮಾಡಬೇಕೆಂದು ತಾಲೂಕ ಪಂಚಾಯತ ಮಾಜಿ ಸದಸ್ಯ ಪ್ರಹ್ಲಾದ ಹೊಸಳ್ಳಿ ಹೇಳಿದರು.

ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..?

ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.

ಮುಂಡರಗಿ ಎಪಿಎಂಸಿ ಅಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ

ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಮದ್ಯ ಮಾರಾಟದ ನಿರ್ಧಾರ ಸದ್ಯಕ್ಕೆ ಇಲ್ವಂತೆ

ಬೆಂಗಳೂರು : ಸದ್ಯ ಮದ್ಯ ಮಾರಾಟ ಮಾಡುವುದಿಲ್ಲ ಎಂಬ ಸುಳಿವನ್ನು ಸಚಿವ ಆರ್. ಅಶೋಕ್ ಹೇಳಿದ್ದಾರೆ.…