ಮಂಡ್ಯ : ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಕೊರೊನಾ ವಾರಿಯರ್ಸ್ ಗಂತೂ ಇದರ ಕಾಟ ಹೆಚ್ಚಾಗುತ್ತಿದೆ. ಜಿಲ್ಲೆಯ ಮದ್ದೂರು ಠಾಣೆಯ 9 ಜನ ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೆಡ್ ಕಾನ್ ಸ್ಟೇಬಲ್ ಸೇರಿದಂತೆ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಅಲ್ಲದೇ, ಮದ್ದೂರು ಪಟ್ಟಣದ ಎರಡೂ ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ನಿಟ್ಟಿನಲ್ಲಿ ಎರಡೂ ಠಾಣೆಯ ಪೊಲೀಸ್ ಸಿಬ್ಬಂದಿಯನ್ನು ಕ್ಯಾರೆಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ಮದ್ದೂರು ಪಟ್ಟಣದ ಪೊಲೀಸ್‌ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್‌ಡೌನ್‌ ಮಾಡಿ ಎಲ್ಲಾ ಸಿಬ್ಬಂದಿಯನ್ನು ಕ್ವಾರೆಂಟೈನ್ ಮಾಡಲು ಎಸ್ಪಿ ಕೆ.ಪರಶುರಾಂ ಆದೇಶಿಸಿದ್ದಾರೆ.
ಸಂಚಾರಿ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಅವರ ಜೊತೆ ಕೆಲಸ ಮಾಡುತ್ತಿದ್ದ ಇತರ ಪೊಲೀಸ್ ಸಿಬ್ಬಂದಿಗೂ ಆತಂಕ ಎದುರಾಗಿದ್ದು, ಆ ಪೊಲೀಸ್ ಸಿಬ್ಬಂದಿ ಮದ್ದೂರಿನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಪೊಲೀಸ್ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಮದ್ದೂರು ನ್ಯಾಯಾಲಯದ ನ್ಯಾಯಾಧೀಶರಿಗೂ ಕೊರೊನಾ ಆತಂಕ ಎದುರಾಗಿದೆ. ಅಲ್ಲದೇ, ಪೊಲೀಸ್ ಸಿಬ್ಬಂದಿ ಸಂಪರ್ಕಕ್ಕೆ ಬಂದಿರುವ ಇನ್ನಿತರ ಪೊಲೀಸ್ ಅಧಿಕಾರಿಗಳನ್ನು ಹಾಗೂ ಅವರ ಕುಟುಂಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ.
ಮದ್ದೂರಿನ ಪೊಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆ ಸೀಲ್‌ಡೌನ್ ಆದ ಪರಿಣಾಮ ನಾಳೆಯಿಂದ ಬೇರೆ ಕಡೆ ಎರಡೂ ಪೊಲೀಸ್ ಠಾಣೆಗಳು ಕರ್ತವ್ಯ ನಿರ್ವಹಿಸಲಿದ್ದು, ಈಗಾಗಲೇ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published.

You May Also Like

7 ವರ್ಷಗಳ ಹಿಂದೆ ಕಳ್ಳತನ ಮಾಡಿದವರ ಈಗ ಅಂದರ್!

ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಈ ನಟ ಈಗ ಟಾಪ್ ನಟರ ಪಟ್ಟಿಯಲ್ಲಿ ಮೊದಲಿಗ!

ಡಿಯರ್‌ ಕಾಮ್ರೇಡ್‌, ಟ್ಯಾಕ್ಸಿವಾಲ, ನೋಟಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಧನೆ ಮಾಡಲಿಲ್ಲ. ಆದರೂ ಬಾಲಿವುಡ್ ನ ಕೆಲವು ನಾಯಕರನ್ನು ಮಣಿಸಿ ದೇವರಕೊಂಡ ಮುನ್ನುಗ್ಗುತ್ತಿದ್ದಾರೆ.