9ಜನ ಪೊಲೀಸರಿಗೆ ವಕ್ಕರಿಸಿದ ಕೊರೊನಾ!


ಮಂಡ್ಯ : ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಕೊರೊನಾ ವಾರಿಯರ್ಸ್ ಗಂತೂ ಇದರ ಕಾಟ ಹೆಚ್ಚಾಗುತ್ತಿದೆ. ಜಿಲ್ಲೆಯ ಮದ್ದೂರು ಠಾಣೆಯ 9 ಜನ ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೆಡ್ ಕಾನ್ ಸ್ಟೇಬಲ್ ಸೇರಿದಂತೆ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಅಲ್ಲದೇ, ಮದ್ದೂರು ಪಟ್ಟಣದ ಎರಡೂ ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ನಿಟ್ಟಿನಲ್ಲಿ ಎರಡೂ ಠಾಣೆಯ ಪೊಲೀಸ್ ಸಿಬ್ಬಂದಿಯನ್ನು ಕ್ಯಾರೆಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ಮದ್ದೂರು ಪಟ್ಟಣದ ಪೊಲೀಸ್‌ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್‌ಡೌನ್‌ ಮಾಡಿ ಎಲ್ಲಾ ಸಿಬ್ಬಂದಿಯನ್ನು ಕ್ವಾರೆಂಟೈನ್ ಮಾಡಲು ಎಸ್ಪಿ ಕೆ.ಪರಶುರಾಂ ಆದೇಶಿಸಿದ್ದಾರೆ.
ಸಂಚಾರಿ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಅವರ ಜೊತೆ ಕೆಲಸ ಮಾಡುತ್ತಿದ್ದ ಇತರ ಪೊಲೀಸ್ ಸಿಬ್ಬಂದಿಗೂ ಆತಂಕ ಎದುರಾಗಿದ್ದು, ಆ ಪೊಲೀಸ್ ಸಿಬ್ಬಂದಿ ಮದ್ದೂರಿನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಪೊಲೀಸ್ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಮದ್ದೂರು ನ್ಯಾಯಾಲಯದ ನ್ಯಾಯಾಧೀಶರಿಗೂ ಕೊರೊನಾ ಆತಂಕ ಎದುರಾಗಿದೆ. ಅಲ್ಲದೇ, ಪೊಲೀಸ್ ಸಿಬ್ಬಂದಿ ಸಂಪರ್ಕಕ್ಕೆ ಬಂದಿರುವ ಇನ್ನಿತರ ಪೊಲೀಸ್ ಅಧಿಕಾರಿಗಳನ್ನು ಹಾಗೂ ಅವರ ಕುಟುಂಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ.
ಮದ್ದೂರಿನ ಪೊಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆ ಸೀಲ್‌ಡೌನ್ ಆದ ಪರಿಣಾಮ ನಾಳೆಯಿಂದ ಬೇರೆ ಕಡೆ ಎರಡೂ ಪೊಲೀಸ್ ಠಾಣೆಗಳು ಕರ್ತವ್ಯ ನಿರ್ವಹಿಸಲಿದ್ದು, ಈಗಾಗಲೇ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version