ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಬಳಿ ನಡೆದಿದೆ.
ಕೊಣ್ಣೂರು ಗ್ರಾಮದ ವೆಂಕಪ್ಪ ಪೂಜಾರ್(65) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಹೊಲಕ್ಕೆ ಹೋಗಿ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುವಾಗ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ಅಪಘಾತ ಸಂಭವಿಸಿದೆ.
ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.