ರಾಯಚೂರ: ಜಿಲ್ಲೆಯಲ್ಲಿಂದು 14 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 457ಕ್ಕೆ ಏರಿಕೆಯಾಗಿದೆ. ಈವರೆಗೆ 355 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 100 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೋವಿಡ್ ರೋಗಕ್ಕೆ ಲಸಿಕೆ ಸಿಗುವತನಕ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಜನರು ಚಾಚೂ ತಪ್ಪದೆ ತಮ್ಮಬದುಕಿನ ಭಾಗವಾಗಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.