ಗದಗ: ಜಿಲ್ಲೆಯಲ್ಲಿಂದು‌ ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪದ 95 ವರ್ಷದ ವೃದ್ಧೆಗೆ ನಿನ್ನೆ ರಾತ್ರಿ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಇಂದು ಸಂಜೆ ಪ್ರಕಟವಾಗುವ ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ಪ್ರಕಟವಾಗುವ ಸಾಧ್ಯತೆ ಇತ್ತು. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ತೀವ್ರ ಉಸಿರಾಟದ ತೊಂದರೆಯಿಂದ ವೃದ್ಧೆ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.

ಕೋವಿಡ್19 ಮಾರ್ಗಸೂಚಿಯನ್ವಯ ವೃದ್ಧೆಯ ಅಂತ್ಯಕ್ರಿಯೇ ಮಾಡಲಾಗುವುದು ಎಂದು ಡಿಸಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಗ್ನಿ ಅವಘಡ ತಪ್ಪಿದ ಬಾರಿ ದುರಂತ

ತಾಲೂಕಿನ ಸುಗನಹಳ್ಳಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಸ್ಪರ್ಶಗೊಂಡು ಹೊಟ್ಟಿನ ಬಣವಿ ಸುಟ್ಟು ಕರಕಲಾದ ಘಟನೆ ಜರುಗಿದೆ.

ಮದ್ಯಸೇವನೆ: ಯುವಕ ಸಾವು

ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಸಾರಾಯಿ ಬಲಿ ಪಡೆದುಕೊಂಡಿದೆ.

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ರಾಜ್ಯಕ್ಕೆ ಮುಂಗಾರು ಯಾವಾಗ ಪ್ರವೇಶಿಸುವುದು ಯಾವಾಗ ಗೊತ್ತಾ?

ಪ್ರತಿ ವರ್ಷ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತಿತ್ತು. ಆದರೆ, ಈ ಬಾರಿ ಜೂ. 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ