ಗದಗ: ಜಿಲ್ಲೆಯಲ್ಲಿಂದು‌ ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪದ 95 ವರ್ಷದ ವೃದ್ಧೆಗೆ ನಿನ್ನೆ ರಾತ್ರಿ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಇಂದು ಸಂಜೆ ಪ್ರಕಟವಾಗುವ ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ಪ್ರಕಟವಾಗುವ ಸಾಧ್ಯತೆ ಇತ್ತು. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ತೀವ್ರ ಉಸಿರಾಟದ ತೊಂದರೆಯಿಂದ ವೃದ್ಧೆ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.

ಕೋವಿಡ್19 ಮಾರ್ಗಸೂಚಿಯನ್ವಯ ವೃದ್ಧೆಯ ಅಂತ್ಯಕ್ರಿಯೇ ಮಾಡಲಾಗುವುದು ಎಂದು ಡಿಸಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಇಂದು 15 ಜನರಿಗೆ ಕೊರೋನಾ ಪಾಸಿಟಿವ್: 35 ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಗದಗ: ಕೊರೋನಾಗೆ ಬೆಚ್ಚಿದ ಗದಗ ಜಿಲ್ಲೆಯ ಜನ. ಇಂದು 15 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಈ…

ಗ್ರಾಮ ಪಂಚಾಯತಿಯ ಯುವಕರ ಗಮನಕ್ಕೆ;

ಉತ್ತರಪ್ರಭ ಸುದ್ದಿಗದಗ: 2022-23 ನೇ ಸಾಲಿನಲ್ಲಿ ಪ್ರಪ್ರಥಮವಾಗಿ ಪ್ರತಿ ಗ್ರಾಮ ಪಂಚಾಯತಿಗೆ ಒಂದರ0ತೆ ಸ್ವಾಮಿ ವಿವೇಕಾನಂದ…

ಫೆ. 24ರಿಂದ ಮುಳಗುಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಇದೇ ಫೆ 24 ರಿಂದ 26 ವರೆಗೆ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ, ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.