ಗದಗ: ಜಿಲ್ಲೆಯ ಕೆಲವು ತಾಲೂಕಿನ ಪ್ರದೇಶಗಳನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಅದರ ವಿವರ ಈ ಕೆಳಗಿನಂತಿದೆ.

ಗದಗ
ಗದಗ ತಾಲೂಕಿನ ಅಸುಂಡಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದ ವಾರ್ಡ ನಂ.2 ಸಿದ್ದನಗೌಡ ಪಾಟೀಲ ಲೇ ಔಟ ಭಾಗದ 100 ಮೀ ಪ್ರದೇಶವನ್ನು ನಿಯಂತ್ರಿತ ( ಕಂಟೇನ್ಮೆಂಟ) ಪ್ರದೇಶವೆಂದು ಮತ್ತು ಪ್ರದೇಶದ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಗದಗ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ದಿನೇಶ ಎಂ.ಆರ್. ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ. ಗದಗ ತಾಲೂಕಿನ ಹೊಂಬಳ ಗ್ರಾಮದ ವಾರ್ಡ ನಂ. 4 ಬ್ರಾಹ್ಮಣ ಕಾಲನಿ ಭಾಗಗಳ 100 ಮೀಟರ್ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಎಂದು ಮತ್ತು ಆ ಪ್ರದೇಶದ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಪಿಎಂಜಿಎಸ್‍ವೈ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಲ್ಲಪ್ಪ ದಿವಟರ್ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
ಗದಗ ತಾಲೂಕಿನ ಯಲಿಶಿರೂರ ಗ್ರಾ,ಪಂ. ವ್ಯಾಪ್ತಿಯ ಹೊಸೂರ ಗ್ರಾಮದ ವಾರ್ಡ ನಂ. 1 ರ ಭಾಗದ 100 ಮೀಟರ್ ಸುತ್ತಲಿನ ವ್ಯಾಪ್ತಿಯನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಬಫರ್ ಝೋನ್ ಎಂದು ಘೋಷಿಸಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಕಣವಿ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ವಾರ್ಡ ನಂ 35 ರ ನಂದೀಶ್ವರ ನಗರ 2ನೇ ಕ್ರಾಸ್ ಭಾಗದ 100 ಮೀಟರ್ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಬಿ.ಮರಿಗೌಡರ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.

ರೋಣ
ರೋಣ ತಾಲೂಕಿನ ಇಟಗಿ ಗ್ರಾಮದ ವಾರ್ಡ ನಂ.4 ರ ಭಾಗದ 100 ಮೀಟರ್ ಸುತ್ತಲಿನ ವ್ಯಾಪ್ತಿಯನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಬಫರ್ ಝೋನ್ ಎಂದು ಘೋಷಿಸಿ ರೋಣ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ನಾಗನಗೌಡ ಪಾಟೀಲ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.

ಮುಂಡರಗಿ
ಮುಂಡರಗಿ ಪುರಸಭೆ ವ್ಯಾಪ್ತಿಯ ವಾರ್ಡ ನಂ. 15 ನೇಕಾರ ಓಣಿಯ ಭಾಗದ ಮತ್ತು ವಾರ್ಡ ನಂ.21 ಅಂಬಾಭವಾನಿ ನಗರದ 100 ಮೀಟರ್ ಸುತ್ತಲಿನ ವ್ಯಾಪ್ತಿಯನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಬಫರ್ ಝೋನ್ ಎಂದು ಘೋಷಿಸಿ ಮುಂರಡಗಿ ಪುರಸಭೆ ಮುಖ್ಯಾಧಿಕಾರಿ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.

ನರಗುಂದ
ನರಗುಂದ ಪುರಸಭೆ ವ್ಯಾಪ್ತಿಯ ವಾರ್ಡ ನಂ. 16, ಸಿದ್ಧನಭಾವಿ ಓಣಿಯ ಭಾಗದ 100 ಮೀಟರ್ ಸುತ್ತಲಿನ ವ್ಯಾಪ್ತಿಯನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಬಫರ್ ಝೋನ್ ಎಂದು ಘೋಷಿಸಿ ನರಗುಂದ ಪುರಸಭೆ ಮುಖ್ಯಾಧಿಕಾರಿ ಎಸ್.ಎ.ಬ್ಯಾಳಿ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.

ಡಿಸಿ ಆದೇಶ

ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ನಿಯಂತ್ರಿತ ಪ್ರದೇಶಕ್ಕೆ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. ಬಫರ್ ಝೋನ್‍ನ ಮೊದಲ ಒಂದು ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ಬಫರ್‍ಝೋನ್ ಇರಲಿದ್ದು ಅಲ್ಲಿ ಪ್ರತಿ ಮನೆ ಮನೆಗಳಲ್ಲೂ ಆರೋಗ್ಯ ತಪಾಸಣೆ ನಡೆಸಲಾಗುವುದು. ನಿಯಂತ್ರಿತ ವಲಯಗಳಲ್ಲಿ ಎಲ್ಲ ದಿನಸಿ ಅಂಗಡಿಗಳು, ಹಾಲಿನ ಅಂಗಡಿಗಳು, ಮಾಂಸ, ಔಷಧ ಸೇರಿದಂತೆ ಎಲ್ಲ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡುವುದು. ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ಮಿಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಅಗತ್ಯ ವಸ್ತುಗಳ ಪೂರೈಕೆಯನ್ನು ಸಂಬಂಧಿತ ಇಲಾಖೆಗಳ ಮೂಲಕವೇ ಪಡೆಯಬೇಕು. ಖಾಸಗಿ ಮೂಲಗಳಿಗೆ ಅವಕಾಶವಿಲ್ಲ, ಈ ಪ್ರದೇಶಗಳ ಜನರು ಮನೆ ಬಿಟ್ಟು ಹೊರಗೆ ತಿರುಗುವುದನ್ನು ನಿಷೇಧಿಸಲಾಗಿದೆ. ಈ ಪ್ರದೇಶಗಳ ಎಲ್ಲ ಶಾಲಾ, ಕಾಲೇಜು, ಕಚೇರಿಗಳನ್ನು ಮುಚ್ಚಲು, ಜನಗುಂಪು ಸೇರುವಿಕೆ, ಕರ್ತವ್ಯ ನಿರತ ವಾಹನ ಹೊರತುಪಡಿಸಿ ವಾಹನ ಸಂಚಾರವನ್ನು ನಿರ್ಭಂಧಿಸಿದೆ. ನಿಯಂತ್ರಿತ ವಲಯ ಎಂದು ಘೋಷಣೆ ಮಾಡಿದ 28 ದಿನಗಳ ಒಳಗೆ ಅಲ್ಲಿ ಯಾವುದೇ ಹೊಸ ಕೋವಿಡ್-19 ಪ್ರಕರಣ ವರದಿಯಾಗದೇ ಇದ್ದಲ್ಲಿ ಅಥವಾ ಆ ನಿಯಂತ್ರಿತ ವಲಯದಲ್ಲಿ ಹತ್ತಕ್ಕಿಂತ ಕಡಿಮೆ ಸಂಪರ್ಕಗಳು/ ಗೃಹ ದಿಗ್ಬಂಧನದಲ್ಲಿ ಸಕ್ರಿಯವಾಗಿದ್ದರೆ ಆಗ ಆ ನಿಯಂತ್ರಿತ ವಲಯವು ಸಾಮಾನ್ಯ ವಲಯವಾಗಿ ಮತ್ತು ಬಫರ್ ಝೋನ್ ಸಾಮಾನ್ಯ ವಲಯವಾಗಿ ಬದಲಾಗುತ್ತದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶದಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ದೇವಿ ಪುರಾಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ

ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.

ಕೊರೊನಾಗೆ ಜಗತ್ತಿನಲ್ಲಿ ಇಲ್ಲಿಯವರೆಗೂ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ಜಗತ್ತಿನಲ್ಲಿ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇಲ್ಲಿಯವರೆಗೂ 2.33 ಲಕ್ಷ ಜನರು ಇದಕ್ಕೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ ಎಂದು ತಿಳಿದು ಬಂದಿದೆ.

ಕಲೆಯ ಅಭಿರುಚಿ ಇಲ್ಲದದಿದ್ದರೆ ನಕಾರಾತ್ಮಕ ಅಪಸವ್ಯಗಳು ಮೈದಳೆಯುತ್ತವೆ

ಲಲಿತಕಲೆ, ಸಾಹಿತ್ಯ, ಸಂಗೀತದಥ ಕಲೆಗಳ ಅಭಿರುಚಿ ಇಲ್ಲದಿರುವುದರಿಂದಲೇ ಆಧನಿಕ ಯುವಜನರಲ್ಲಿ ನಕಾರಾತ್ಮಕ ಚಿಂತನೆಗಳು ಮೂಡುತ್ತಿವೆ