ಕೊರೊನಾದಿಂದಾಗಿ ಬಸ್ ಹತ್ತದ ಜನ!!

ಬೆಂಗಳೂರು : ಕೊರೊನಾ ಭಯದಿಂದಾಗಿ ಜನರು ಸಾರಿಗೆ ಸಂಸ್ಥೆಯ ಬಸ್ ನಿಂದ ದೂರ ಉಳಿಯುತ್ತಿದ್ದಾರೆ. ಹೀಗಾಗಿ ಆದಾಯದಲ್ಲಿ ತೀವ್ರ ಇಳಿಕೆ ಕಾಣುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಸಿಬ್ಬಂದಿಗಳಿಗೆ ಯಾವುದೇ ಅನಾನುಕೂಲತೆ ಆಗದಂತೆ ಅನಗತ್ಯ ವೆಚ್ಚಗಳನ್ನು ಕಡಿಮೆಗೊಳಿಸುವ ಕುರಿತು ಹಲವಾರು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳಲ್ಲಿ ಯಾರೊಬ್ಬರೂ ಕರ್ತವ್ಯದಿಂದ ವಂಚಿತರಾಗಬಾರದು ಎಂಬ ಉದ್ಧೇಶದಿಂದ ಹಾಗೂ ಎಲ್ಲರಿಗೂ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತಾಗಲು ರೊಟೇಷನ್ ಆಧಾರದಲ್ಲಿ ಸಿಬ್ಬಂದಿಗಳನ್ನು ಇದೇ ಮೊದಲ ಬಾರಿಗೆ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಹೋಂ ಗಾರ್ಡ್ಸ್ (ಗೃಹ ರಕ್ಷಕ) ಸಿಬ್ಬಂದಿಗಳ ಬದಲಿಗೆ ಸಾರಿಗೆ ಸಂಸ್ಥೆಗಳಲ್ಲಿ ಆಸಕ್ತಿ ಹೊಂದಿರುವಂತಹ ಸಿಬ್ಬಂದಿಗಳನ್ನು ಭದ್ರತಾ ರಕ್ಷಕ ಹುದ್ದೆಗಳಿಗೆ ಉಪಯೋಗಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

55 ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಅವರ ಆರೋಗ್ಯದ ಆಧಾರದ ಮೇಲೆ ಉದಾರವಾಗಿ ರಜೆ ಮಂಜೂರು ಮಾಡಲಾಗುವುದು. ಅಷ್ಟೇ ಅಲ್ಲ ಹೃದಯಬೇನೆ, ರಕ್ತದ ಒತ್ತಡಗಳಂತಹ ಕಾಯಿಲೆ ಇರುವರಿಗೆ ಅಗತ್ಯ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗುವುದು. ಗರ್ಭಿಣಿ ಸಿಬ್ಬಂದಿಗಳಿಗೆ ಲಘು ಕರ್ತವ್ಯದ ಮೇಲೆ ನಿಯೋಜಿಸಲು ಆದೇಶ ಮಾಡಲಾಗಿದೆ.

Exit mobile version