ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿ ದಿನ ದಾಖಲೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ನಿನ್ನೆ ಒಂದೇ ದಿನ ದೇಶದಲ್ಲಿ ಸೋಂಕಿತರ ಸಂಖ್ಯೆ 18,552ರಷ್ಟಾಗಿದೆ.

ದಾಖಲೆಯ ಸೋಂಕಿತರೊಂದಿಗೆ ನಿನ್ನೆ 384 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಮೃತರ ಸಂಖ್ಯೆ 15,600ಕ್ಕೂ ಅಧಿಕವಾಗಿದೆ.

ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 5,08,953 ಜನರಲ್ಲಿ ಸೋಂಕು ದೃಢಪಟ್ಟಿದೆ. ಸಾವಿನ ಸಂಖ್ಯೆ 15,685ಕ್ಕೆ ಏರಿದೆ. ಒಟ್ಟು ಪ್ರಕರಣಗಳಲ್ಲಿ 2,95,879 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ 1,97,387 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿರುವುದು ಆತಂಕ ಮೂಡಿಸುತ್ತಿದೆ. ಮಹಾರಾಷ್ಟ್ರ ದೇಶದಲ್ಲಿಯೇ ಹೆಚ್ಚು 1,52,765 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜೊತೆಗೆ 7,106 ಜನರು ಸಾವನ್ನಪ್ಪಿದ್ದಾರೆ. ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ದೆಹಲಿ ಎರಡನೇ ಸ್ಥಾನದಲ್ಲಿದೆ. ಅಲ್ಲಿ 77,240 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 2,492 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 74,622 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 957 ಜನರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ವಾಷಿಂಗ್ಟನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ: ಕ್ಷಮೆ ಕೋರಿದ ಅಮೆರಿಕ

ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದಿರುವ ಮಹಾತ್ಮ ಗಾಂಧಿ ಮೂರ್ತಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ: ಗದಗನಲ್ಲಿ 3 ವಿದ್ಯಾರ್ಥಿಗಳು ಡಿಬಾರ್..!

ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್…

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…