ಹುಬ್ಬಳ್ಳಿ : ಕೊರೊನಾ ಮಹಾಮಾರಿಗೆ ಇಡೀ ದೇಶವೇ ನಲುಗುತ್ತಿದೆ. ಪ್ರತಿಯೊಂದು ಕ್ಷೇತ್ರಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ. ಹೀಗೆ ಆರ್ಥಿಕ ಸಂಕಷ್ಟಕ್ಕೆ ಒದ್ದಾಡುತ್ತಿರುವ ವಾಯುವ್ಯ ಸಾರಿಗೆ ಸಂಸ್ಥೆ ಸಿಬ್ಬಂದಿ ಕಡಿತಗೊಳಿಸಲು ಮುಂದಾಗಿದೆ.

ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ವಿಆರ್ ಎಸ್ (ವಾಲಂಟರಿ ರಿಟೈರ್ಮೆಂಟ್ ಸಿಸ್ಟಮ್) ನೀಡಲು ಮುಂದಾಗಿದೆ. ಜೊತೆಗೆ ನಷ್ಟ ಸರಿಪಡಿಸಲು ಸಂಸ್ಥೆಯಲ್ಲಿನ ಬಡ್ತಿ ಹೊಂದುವ ಹುದ್ದೆಗಳ ಕಡಿತ ಹಾಗೂ ವಿಲೀನ ಮಾಡಲು ಮುಂದಾಗಿದೆ.

ಈ ಕುರಿತು ಸಂಸ್ಥೆ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ. ಸೋಂಕಿನಿಂದ ವೃದ್ಧರೇ ಹೆಚ್ಚಾಗಿ ಬಲಿಯಾಗುತ್ತಿರುವುದರಿಂದಾಗಿ ಕೆಲಸ ಮಾಡುವ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ವಿ ಆರ್ ಎಸ್ ನೀಡಲು ಮುಂದಾಗಿದೆ. ಆದರೆ, ಈ ನಿರ್ಧಾರವನ್ನು ಸಿಬ್ಬಂದಿಗಳು ವಿರೋಧಿಸುತ್ತಿದ್ದಾರೆ. ಅನಾವಶ್ಯಕ ಖರ್ಚುಗಳಿಗೆ ಸರ್ಕಾರ ಬ್ರೇಕ್ ಹಾಕಲಿ ಎಂದು ಸಾರಿಗೆ ಸಂಸ್ಥೆಯ ಸಿಬ್ಬಂದಿ ಹೇಳುತ್ತಾರೆ.

ಕೊರೊನಾ ಬಂದ ನಂತರ ಕೇಂದ್ರ ಸರ್ಕಾರ ನೌಕರರನ್ನು ಕೆಲಸದಿಂದ ತೆಗೆಯದಂತೆ ಆದೇಶ ಹೊರಡಿಸಿದೆ. ಆದರೆ, ಸಾರಿಗೆ ಸಂಸ್ಥೆ ಈ ನಿರ್ಧಾರ ಕೈಗೊಳ್ಳುಲು ಮುಂದಾಗಿರುವುದು ಮಾತ್ರ ನೌಕರ ವಿರೋಧಿ ನೀತಿಯಾಗಿದೆ.

Leave a Reply

Your email address will not be published.

You May Also Like

ಗದಗ ಜಿಲ್ಲೆಯಲ್ಲಿಂದು ಶತಕ ದಾಟಿದ ಸೋಂಕಿತರ ಸಂಖ್ಯೆ !

ಜಿಲ್ಲೆಯಲ್ಲಿಂದು 108 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 882 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 11 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…