ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹತ್ತು ಮತ್ತು ಹನ್ನೆರಡನೆ ತರಗತಿಯ ಇನ್ನುಳಿದ ಪರೀಕ್ಷೆಗಳನ್ನು ರದ್ದುಗೊಳಿಸಿದ ಬಳಿಕ ಮಾಧ್ಯಮಗಳಲ್ಲಿ 10ನೇ ತರಗತಿ ಪರೀಕ್ಷೆ ಬಗ್ಗೆ ತಪ್ಪು ವರದಿ ಪ್ರಕಟವಾಗಿದೆ. ಈಗಾಗಲೇ ಮುಗಿದಿರುವ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕ ಮತ್ತು ಇಂಟರ್ನಲ್ ಅಸ್ಸೆಸ್ಸ್ ಮೆಂಟ್ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಲೆಕ್ಕಹಾಕಲಾಗುತ್ತದೆ ಎಂದು ತಿಳಿಸಿದೆ.

ಇನ್ನು 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದಿಲ್ಲ. ಮೌಲ್ಯಮಾಪನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಫಲಿತಾಂಶ ಪ್ರಕಟಿಸಲಾಗುತ್ತದೆ ಮತ್ತು ಅದು ಅಂತಿಮ ಎಂದು ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

You May Also Like

ಭಾನುವಾರ ಮದುವೆಗೆ ಅವಕಾಶ ರಾಜ್ಯ ಸರ್ಕಾರದ ಆದೇಶ

ರಾಜ್ಯಾಧ್ಯಂತ ಪ್ರತಿ ಭಾನುವಾರದಂದು ಬೆಳಿಗ್ಗೆ 7ಗಂಟೆಯಿಂದ ಸಂಜೆಯ 7 ಗಂಟೆಯವರೆಗೆ ಕರ್ಪ್ಯೂ ಜಾರಿ ಮಾಡಿದ್ದರಿಂದಾಗಿ, ಮದುವೆ ಸಮಾರಂಭ ಕೂಡ ನಡೆಸಬಾರದಾ ಎಂಬ ಗೊಂದಲಕ್ಕೆ ರಾಜ್ಯದ ಜನತೆ ಒಳಗಾಗಿದ್ದರು. ಇದೀಗ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಅವಕಾಶ ನೀಡಿ, ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಜಮೀನು ವಿವಾದ ಕೊಲೆಯಲ್ಲಿ ಅಂತ್ಯ.

ಜಮೀನು ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೆರಿ ಜಿಲ್ಲೆಯಲ್ಲಿ ನಡೆದಿದೆ.

ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿರುವ ಪೆಟ್ರೋಲ್ ಬೆಲೆ.

ಕಳೆದ ವರ್ಷ ಮೇ ತಿಂಗಳಿಂದ ಇಲ್ಲಿಯವರೆಗೆ ಪೆಟ್ರೋಲ್ ಬೆಲೆಯು 31ರೂ 95 ಪೈಸೆ ಹಾಗೂ ಡೀಸೆಲ್ ಬೆಲೆ 27ರೂ 58 ಪೈಸೆಗೆ ಏರಿಕೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ.

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .