ಒಡಿಶಾ : ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸ್ ಠಾಣೆಯ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ನಡೆದಿದೆ. 

ಒಡಿಶಾದ ಬುಡಕಟ್ಟು ಸಮುದಾಯದ ಜನರು ಪ್ರಾಬಲ್ಯವಿರುವ ಸುಂದರ್‌ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಬಿರಾಮಿತ್ರಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಆನಂದ್ ಚಂದ್ರ ಮಾಝಿ ಮತ್ತು ಇತರ ಐವರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಮಾ. 25ರಂದು ಬಿರಾಮಿತ್ರಪುರದಲ್ಲಿ ಪ್ರತೀ ವರ್ಷ ಜಾತ್ರೆ ನಡೆಯುತ್ತಿತ್ತು. ಲಾಕ್‌ಡೌನ್‌ ಇದ್ದಿದ್ದರಿಂದ ಜಾತ್ರೆಯನ್ನು ರದ್ದು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಬಾಲಕಿ ವಿಫಲವಾಗಿ ಅಲ್ಲಿಯೇ ಬಸ್‌ಸ್ಟ್ಯಾಂಡ್‌ನಲ್ಲಿ ತಿರುಗಾಡುತ್ತಿದ್ದಳು. ಇದನ್ನು ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ತಂಡ ಬಾಲಕಿಯನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದಿದ್ದಾರೆ.

ಈ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ ಠಾಣೆಯಲ್ಲಿದ್ದ ಇತರೆ ಪೊಲೀಸ್‌ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಮಾಡಿ ಮರುದಿನ ಆಕೆಯ ಮನೆಗೆ ತಲುಪಿಸಿದ್ದಾರೆ. ನಂತರ ಆಕೆ ಗರ್ಭಿಣಿಯಾಗಿರುವುದನ್ನು ಅರಿತ ಪೊಲೀಸರು ವೈದ್ಯರ ಮೂಲಕ ಗರ್ಭಪಾತ ಮಾಡಿಸಿದ್ದಾರೆ. ಈ ಸಂಗತಿ ತಿಳಿದ ಜಿಲ್ಲಾ ಮಕ್ಕಳ ಸಂರಕ್ಷಣಾ ಅಧಿಕಾರಿ ಎಸ್ ಜೇನಾ ಅವರು, ಪೊಲೀಸ್‌ ಇನ್ಸ್‌ಪೆಕ್ಟರ್‌, ಗರ್ಭಪಾತ ಮಾಡಿದ ವೈದ್ಯ, ಬಾಲಕಿಯ ಮಲತಂದೆ ಮತ್ತು ಇನ್ನಿಬ್ಬರ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ಇನ್ಸಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ. ಇನ್ನುಳಿದ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆ

ಉತ್ತರಪ್ರಭ ಸುದ್ದಿ ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ…

ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಕಡ್ಡಾಯಕ್ಕೆ ಸಚಿವ ನಿತಿನ್ ಗಡ್ಕರಿ ಸಲಹೆ

ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಸಚಿವ ನಿತಿನ್ ಗಡ್ಕರಿ ಸಲಹೆ ನೀಡಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಸಾರಿಗೆ ಇಲಾಖೆ ಕಚೇರಿ ಆರಂಭ!

ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ಬಾಗೇವಾಡಿ ಅಪಘಾತ: ಓರ್ವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವು..!

ಮುಂಡರಗಿ: ಈಗಾಗಲೇ ವರ್ಷ ಪೂರ್ತಿ ಓದಿ ಪರೀಕ್ಷೆಗಾಗಿ ಕಾದಿದ್ದ ಆ ವಿದ್ಯಾರ್ಥಿ ಪರೀಕ್ಷೆ ಮುಗಿಸುವ ಮುನ್ನವೇ…