ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ ಹಿಂದೆ ಘೋಷಿಸಿದಂತೆ ರಾಜ್ಯದಲ್ಲಿ ಪ್ರತಿ ಭಾನುವಾರ ಕಂಪ್ಲೀಟ್ ಬಂದ್ ಇರಲಿದೆ. ಜುಲೈ 5 ರಿಂದ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದೆ.
ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಯಾವುದೇ ಅಂಗಡಿ – ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಬಸ್, ಟ್ಯಾಕ್ಸಿ, ಆಟೋ ಸೇರಿದಂತೆ ಯಾವುದೇ ವಾಹನಗಳನ್ನು ಓಡಾಡುವಂತಿಲ್ಲ. ನಿಯಮ ಉಲ್ಲಂಘಿಸಿದವರ ಮೇಲೆ ಕೇಸ್ ಹಾಕಲು ಸರ್ಕಾರವು ಪೊಲೀಸ್ ಇಲಾಖೆಗೆ ಸೂಚಿಸಿದೆ. ಅಲ್ಲದೇ, ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸದ ಅವಧಿ ನೀಡಲಾಗಿದೆ. ಶನಿವಾರ ಹಾಗೂ ಭಾನುವಾರ ಸರ್ಕಾರಿ ಕೆಲಸಗಾರರಿಗೆ ರಜೆ ನೀಡಲಾಗುವುದು ಎಂದು ತಿಳಿದು ಬಂದಿದ್ದು ಈ ಕುರಿತು ಸರ್ಕಾರದ ಅಧಿಕೃತ ಆದೇಶ ಹೊರಬೀಳಬೇಕಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-6

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.

ಅಧಿಕಾರಿಗಳ ಆತುರ: ನರೆಗಲ್ಲನಲ್ಲಿ ಅನಾಥವಾದ ಉದ್ಯಾನವನ..!

ಗದಗ ಜಿಲ್ಲೆಯ ನರೇಗಲ್ಲ ನಲ್ಲಿ ಅಧಿಕಾರಿಗಳ ಆತುರದ ನಿರ್ಧಾರದಿಂದ ಉದ್ಯಾನವನ ಇದ್ದು ಇಲ್ಲದಂತಾಗಿದೆ.

ರಾಜ್ಯದಲ್ಲಿಂದು 1694 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ರೋಣ ತಾಲೂಕು ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ಪ್ರಕಟ

ರೋಣ: ತಾಲೂಕಿನ 24 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಪ್ರಕ್ರಿಯೆ ವೀರಭದ್ರೇಶ್ವರ ಕಲ್ಯಾಣ…