ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ ಹಿಂದೆ ಘೋಷಿಸಿದಂತೆ ರಾಜ್ಯದಲ್ಲಿ ಪ್ರತಿ ಭಾನುವಾರ ಕಂಪ್ಲೀಟ್ ಬಂದ್ ಇರಲಿದೆ. ಜುಲೈ 5 ರಿಂದ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದೆ.
ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಯಾವುದೇ ಅಂಗಡಿ – ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಬಸ್, ಟ್ಯಾಕ್ಸಿ, ಆಟೋ ಸೇರಿದಂತೆ ಯಾವುದೇ ವಾಹನಗಳನ್ನು ಓಡಾಡುವಂತಿಲ್ಲ. ನಿಯಮ ಉಲ್ಲಂಘಿಸಿದವರ ಮೇಲೆ ಕೇಸ್ ಹಾಕಲು ಸರ್ಕಾರವು ಪೊಲೀಸ್ ಇಲಾಖೆಗೆ ಸೂಚಿಸಿದೆ. ಅಲ್ಲದೇ, ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸದ ಅವಧಿ ನೀಡಲಾಗಿದೆ. ಶನಿವಾರ ಹಾಗೂ ಭಾನುವಾರ ಸರ್ಕಾರಿ ಕೆಲಸಗಾರರಿಗೆ ರಜೆ ನೀಡಲಾಗುವುದು ಎಂದು ತಿಳಿದು ಬಂದಿದ್ದು ಈ ಕುರಿತು ಸರ್ಕಾರದ ಅಧಿಕೃತ ಆದೇಶ ಹೊರಬೀಳಬೇಕಿದೆ.

Leave a Reply

Your email address will not be published. Required fields are marked *

You May Also Like

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…

ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಇನ್ನು ಲಾಕ್ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕೊರೊನಾ ಪಾಸಿಟಿವ್ ಆರೋಗ್ಯ ಕೇಂದ್ರದ ನೌಕರ ಬಲಿ!

ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ…

ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು…