ಬೆಂಗಳೂರು: ಲಾಕ್ ಡೌನ್ ಬಗ್ಗೆ ಸರ್ಕಾರ ಈಗಾಗಲೇ ನೀಡಿರುವ ಮಾರ್ಗಸೂಚಿಗೆ ಕೆಲವೊಂದು ಅಂಶಗಳನ್ನು ಸೇರ್ಪಡಿಸಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಹೊಸ ಆದೇಶದಂತೆ ದಿನಾಂಕ 05/07/2020 ಭಾನುವಾರದಿಂದ 02/08/2020 ರ ವರೆಗಿನ 4 ಭಾನುವಾರಗಳು ದಿನಪೂರ್ತಿ ಲಾಕ್‌ಡೌನ್‌ ಇರಲಿದೆ. ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜುಲೈ 10 ರಿಂದ ಆಗಸ್ಟ್‌ 08 ರವರೆಗೆ ಎಲ್ಲಾ ಶನಿವಾರಗಳು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಕಚೇರಿಗಳು, ಬೋರ್ಡುಗಳು ಹಾಗೂ ಕಾರ್ಪೊರೇಷನ್‌ಗಳು ಮುಚ್ಚಲು ಆದೇಶ ನೀಡಲಾಗಿದೆ. ತುರ್ತು ಮತ್ತು ಅಗತ್ಯ ಸೇವೆಗಳನ್ನು ನೀಡುವ ಸಂಸ್ಥೆಗಳು ಇದರಿಂದ ಹೊರತಾಗಿರುತ್ತದೆ.

ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ರ ವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಡದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ಸರ್ಕಾರಗಳ ಸಾಧನೆ ಮನೆ-ಮನೆಗೆ ತಲುಪಿಸಿ- ಲಿಂಗರಾಜ ಪಾಟೀಲ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮನೆ-ಮನೆಗೆ ತಲುಪಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಧಾರವಾಡ ವಿಭಾಗೀಯ ಬಿಜೆಪಿ ಸಂಘಟನಾ ಪ್ರಭಾರಿ ಲಿಂಗರಾಜ್ ಪಾಟೀಲ್ ಹೇಳಿದರು.

ಕೊರೋನಾ ಸೋಂಕಿನಿಂದ ಗುಣ ಹೊಂದಿದ 12 ದಿನದ ಮಗುವಿನ ಹೆಸರೇನು ಗೊತ್ತಾ?

ಒಂಭತ್ತು ದಿನದ ಮಗುವಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಇದೀಗ 12 ದಿನದ ಈ ಮಗು ಕೊರೋನಾ ಸೋಂಕಿನಿಂದ ಗುಣ ಹೊಂದಿದ್ದು ಮಗುವಿಗೆ ಇಂದು ಹೆಸರಿಡಲಾಗಿದೆ.