ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ.
ಜಿಲ್ಲೆಯ ಗುಳೇದಗುಡ್ಡ ತಾಲೂಕಿನ 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಸಾವನ್ನಪ್ಪಿದ್ದು, ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.
ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಹೀಗಾಗಿ ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಬಾಗಲಕೋಟೆ ಡಿಹೆಚ್‍ಓ ಅನಂತ ದೇಸಾಯಿ ಮಾಹಿತಿ ನೀಡಿದ್ದಾರೆ.
ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಗೆ ಐವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13,190ಕ್ಕೇರಿಕೆಯಾಗಿದ್ದು, ಭಾನುವಾರ ಒಂದೇ ದಿನ 16 ಮಂದಿ ಸಾವನ್ನಪ್ಪಿದ್ದಾರೆ.