ನವದೆಹಲಿ : ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು, ತರಬೇತಿ ಕೇಂದ್ರಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದೆ.

ಅನ್ಲಾಕ್-1 ಜೂನ್ 30ಕ್ಕೆ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಅನ್ಲಾಕ್-2 ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಅನ್ಲಾಕ್ -2 ಮಾರ್ಗಸೂಚಿಗಳು

1) ಮೆಟ್ರೋ ರೈಲು, ಸಿನಿಮಾ ಥೀಯೇಟರ್ ಗಳು, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್, ಎಂಟರ್ ಟೈನ್ಮೆಂಟ್ ಪಾರ್ಕ್ ಗಳು, ಬಾರ್, ಸಭಾ ಭವನಗಳು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳನ್ನು ತೆರೆಯುವಂತಿಲ್ಲ.

2) ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸೇರಿದಂತೆ ದೊಡ್ಡ ಸಮಾರಂಭಗಳನ್ನು ಆಯೋಜಿಸುವಂತಿಲ್ಲ.

3) ಶಾಲಾ, ಕಾಲೇಜುಗಳನ್ನು ತೆರೆಯುವಂತಿಲ್ಲ.

4) ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯಯವಾಗಿ ಮಾಸ್ಕ್ ಧರಿಸಬೇಕು.

5) 6 ಅಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.

6) ಮದುವೆ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚಿನ ಜನರು ಸೇರುವಂತಿಲ್ಲ.

7) ಅಂತ್ಯಕ್ರಿಯೆಗಳಲ್ಲಿ 20ಕ್ಕಿಂತ ಹೆಚ್ಚಿನ ಜನರು ಸೇರುವಂತಿಲ್ಲ.

8) ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ಹಾಕಲಾಗುವುದು.

9) ವರ್ಕ್ ಫ್ರಂ ಹೋಮ್ ಗೆ ಮೊದಲ ಆದ್ಯತೆ ನೀಡಬೇಕು.

10) ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಕಂಪನಿಗಳು ನೋಡಿಕೊಳ್ಳಬೇಕು.

11) ಕೆಲಸದ ಸ್ಥಳ, ಮಾರುಕಟ್ಟೆ, ಮಾಲ್, ಧಾರ್ಮಿಕ ಕೇಂದ್ರಗಳ ಆಗಮನ ಮತ್ತು ನಿರ್ಗಮನ ದ್ವಾರದಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದು.

Leave a Reply

Your email address will not be published. Required fields are marked *

You May Also Like

ಬಿಹಾರ ಸಮರ – ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ!

ಪಾಟ್ನಾ : ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ.

ಮಸ್ಕಿಗೆ ಮೂಲಭೂತ ಸೌಕರ್ಯ ಮರೀಚಿಕೆ..!

ಜಿಲ್ಲೆಯ ಮಸ್ಕಿ ಪಟ್ಟಣ ತಾಲೂಕು ಕೇಂದ್ರವಾಗಿ ಎರಡು ವರ್ಷ ಉರುಳುತ್ತಿದ್ದರು. ಇಲ್ಲಿನ ಮೂಲಭೂತ ಸೌಕರ್ಯಗಳು ಸಾರ್ವಜನಿಕರಿಗೆ ದೊರೆಯುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ…

ಶುಭ ಸುದ್ದಿ: ನಿಮ್ಮ ಮಗುವಿಗೆ ‘ಆಧಾರ್’ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ದೇಶದಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಆಧಾರ್ ಸೌಲಭ್ಯವನ್ನು ಒದಗಿಸಲಾಗಿದೆ.

ಗೆಳೆಯನೊಂದಿಗೆ ಅಪ್ರಾಪ್ತೆಯ ಸೆಕ್ಸ್ – ನೋಡಿದ್ದಕ್ಕೆ ಅಜ್ಜಿಯ ಕೊಲೆ!

ಲಕ್ನೋ: ಅಪ್ರಾಪ್ತ ಬಾಲಕಿ ತನ್ನ ಪ್ರಿಯಕರನ ಜೊತೆ ಸೆಕ್ಸ್ ಮಾಡುತ್ತಿರುವುದನ್ನು ಸಾಕು ಅಜ್ಜಿ ನೋಡಿದ್ದಾರೆ ಎಂಬ…