ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಸದ್ಯ ವಕ್ಕರಿಸಿದೆ. 

ಗ್ರಾಮದಲ್ಲಿನ ಒಂದೇ ಮನೆಯಲಲಿ ಸುಮಾರು 60 ಜನರು ಇರುವ ಅವಿಭಕ್ತ ಕುಟುಂಬಕ್ಕೆ ಕೊರೊನಾ ಎಂಟ್ರಿ ಕೊಟ್ಟಿದೆ. ಮನೆಯ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಲಾಕ್ಡೌ ನ್ ಸಮಯದಲ್ಲಿ ಸೋಂಕಿತ ವ್ಯಕ್ತಿ ಕಿರಾಣಿ ಸಾಮಾನುಗಳನ್ನು ತರುವುದಕ್ಕೋಸ್ಕರ ಹುಬ್ಬಳ್ಳಿ, ಧಾರವಾಡ ಸುತ್ತಾಡಿದ್ದ. ಈ ಸಂದರ್ಭದಲ್ಲಿಯೇ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ. ಈ ಸೋಂಕಿತ ವ್ಯಕ್ತಿ ಕೆಲವು ದಿನಗಳ ಹಿಂದೆ ಗ್ರಾಮದ ತುಂಬ ಸುತ್ತಾಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಸದ್ಯ ಅವಿಭಕ್ತ ಕುಟುಂಬಕ್ಕೆ ಕೊರೊನಾ ಬಂದಿದ್ದರಿಂದ ಇಡಿ ಗ್ರಾಮವನ್ನ ಸಿಲ್ಡೌಗನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಪರಪ್ಪನ ಅಗ್ರಹಾರಕ್ಕೂ ಕೊರೊನಾ ಕಾಟ..!

ಬೆಂಗಳೂರು: ಕೊರೊನಾ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಸದ್ಯ ಇದು ಪರಪ್ಪನ ಅಗ್ರಹಾರಕ್ಕೂ ಎಂಟ್ರಿ…

ಹೊಗಳಿದ್ದು ಸಾಕು; ಸಾಮರ್ಥ್ಯ ತೋರುವ ಅವಕಾಶ ನೀಡಿ

ಅರಣ್ಯ ಪ್ರದೇಶ ಹಾಗೂ ಗುಡ್ಡಗಾಡಿನ ಹಳ್ಳಿಗಳ ಶಾಲೆಗೆ ಹೋಗುವ ಶಿಕ್ಷಕಿಯರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇದೆ. ಬಹಳಷ್ಟು ಹಳ್ಳಿಗಳಲ್ಲಿಯೂ ರಕ್ಷಣೆ ಅಗತ್ಯವಾಗಿದೆ. ಆದ್ದರಿಂದ ಶಿಕ್ಷಕಿಯರಿಗಾಗಿ ಗ್ರಾಮೀಣ ಪ್ರದೇಶದಲ್ಲಿ ವಸತಿ ಸೌಕರ್ಯ ಕಲ್ಪಿಸಬೇಕು’ ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಡಾ.ಲತಾ ಮುಳ್ಳೂರ ಒತ್ತಾಯಿಸಿದರು.

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಕುರಿ, ಮೇಕೆ ಕಳ್ಳರು ಅಂದರ್..!

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೇಕೆ ಹಾಗೂ ಕುರಿ ಕಳ್ಳತನ ಪ್ರಕರಣಗಳು ಕಂಡು ಬಂದಿದ್ದವು. ಘಟನೆ ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿತ್ತು. ಆದರೆ ಕೊನೆಗೂ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…