ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ನಾಯಕರ ಜೊತೆ ನೂರಾರು ಕಾರ್ಯಕರ್ತರು ಸೈಕಲ್‌ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಬೈಕನ್ನು ಚಟ್ಟಕ್ಕೆ ಕಟ್ಟಿ ಎತ್ತಿಕೊಂಡು ಶವದಂತೆ ಎತ್ತಿಕೊಂಡು ಹೋಗಿ ಪ್ರತಿಭಟಿಸಿದರು. ನೂರಾರು ಜನ ಭಾಗವಹಿಸಿದ್ದರಿಂದ ಟ್ರಾಫಿಕ್ ಜಾಮ್‌ನಲ್ಲಿ ಅಂಬುಲೆನ್ಸ್‌ ಸಿಲುಕಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 130 ಡಾಲರ್ ಇತ್ತು. ಆಗಲೇ ಪೆಟ್ರೋಲ್, ಡೀಸೆಲ್, ಗ್ಯಾಸ್ ಗೆ ಕಾಂಗ್ರೆಸ್‌ ಸರ್ಕಾರ 2.41 ಲಕ್ಷ ಕೋಟಿ ರೂ ಸಬ್ಸಿಡಿ ನೀಡುತ್ತಿತ್ತು. ಈಗ ಕಚ್ಚಾ ತೈಲದ ಬ್ಯಾರೆಲ್ ಗೆ ಬೆಲೆ 40 ಡಾಲರ್ ನಷ್ಟಿದೆ. ಹೀಗಾಗಿ ಸದ್ಯ ತೈಲ ಬೆಲೆ ರೂ. 25 ಲೀಟರ್ ಗೆ ಮಾರಬೇಕು. ಕೇಂದ್ರ ಸರ್ಕಾರ ಒಂದು ರೂ. ಸಬ್ಸಿಡಿ ನೀಡುತ್ತಿಲ್ಲ. ಅಬಕಾರಿ ಸುಂಕ ಏರಿಸಿದ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದಲಿತರ ಮೇಲೆ ಮಾರಣಾಂತಿಕ ಹಲ್ಲೆ : ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ ಅನ್ವಯ ಬಂಧನಕ್ಕೆ ಆಗ್ರಹ

ಉತ್ತರಪ್ರಭ ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ…

4 ಸಾವಿರ ತಬ್ಲಿಘಿಗಳ ಬಿಡುಗಡೆಗೆ ಆದೇಶ ನೀಡಿದ ದೆಹಲಿ ಸರ್ಕಾರ!

ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಆದೇಶಿಸಿದೆ.

ಕೋಟೆನಾಡಿನಲ್ಲಿ ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…