ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯಾರ್ಥಿಗಳು ಗೈರಾಗಿದ್ದು ಅಷ್ಟೊಂದು ವ್ಯತ್ಯಾಸವಾಗಿಲ್ಲ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

Exit mobile version