ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 7,507 ಜನರು ಗುಣಮುಖರಾಗಿದ್ದಾರೆ. 5,472 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇ. 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡು ಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇ. 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ. 1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಪಂ ಚುನಾವಣೆ ನಾಳೆ ಚಿಹ್ನೆ ಹಂಚಿಕೆ : ಅಭ್ಯರ್ಥಿಗಳಿಗೆ ಚಿನ್ಹೆ ಹಂಚಿಕೆ ಕ್ರಮ ಹೇಗಿರುತ್ತೆ ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದ ನಂತರ ಸ್ಪರ್ಧೆ ಇರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14 ರಂದು ಚುನಾವಣಾಧಿಕಾರಿಗಳು ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮಾ.31ರ ವರೆಗೆ ವಿಸ್ತರಣೆ

ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.

ಗದಗ: ನಗರಾಭಿವೃದ್ಧಿ ಕೋಶ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.