ಮುಂಬಯಿ : ಕೊರೊನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 5,493 ಜನರಲ್ಲಿ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 5,493 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,64,626ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 156 ಸೋಂಕಿತರು ಸಾವನ್ನಪ್ಪಿದ್ದು, ವೈರಸ್ ಗೆ ಬಲಿಯಾದವರ ಸಂಖ್ಯೆ 7,429ಕ್ಕೆ ಏರಿಕೆ ಕಂಡಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 70,607 ಸಕ್ರೀಯ ಪ್ರಕರಣಗಳಿದ್ದು, 94,019ಕ್ಕೆ ಏರಿಕೆಯಾಗಿದೆ. 

ಮಹಾಮಾರಿಗೆ ಮಹಾರಾಷ್ಟ್ರ ಪೊಲೀಸ್ ಇಲಾಖೆ ತತ್ತರಿಸಿದ್ದು, 150 ಜನ ಪೊಲೀಸರಿಗೆ ಸೋಂಕು ದೃಢಪಟ್ಟಿದೆ. ಆ ಮೂಲಕ ಮಹಾರಾಷ್ಟ್ರದಲ್ಲಿ ವೈರಸ್ ಸೋಂಕಿಗೆ ತುತ್ತಾದ ಪೊಲೀಸರ ಸಂಖ್ಯೆ 4,666ಕ್ಕೆ ಏರಿಕೆಯಾಗಿದೆ. ನಿನ್ನೆ ಕೂಡ ಓರ್ವ ಪೊಲೀಸ್ ಸಾವನ್ನಪ್ಪಿದ್ದು, ಸತ್ತವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು!

ನಮ್ಮನ್ನು ಊರಿಗೆ ಕಳುಹಿಸಿ ಎಂದು ಸುಮಾರು 700 ವಲಸೆ ಕಾರ್ಮಿಕರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಉದ್ಧವ್ ಠಾಕ್ರೆ ಮನದಲ್ಲಿ ಮೂಡಿದ ನಿರಾಳ!

ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಮತ್ತೆ ಕೇಂದ್ರದಿಂದ ಪಡಿತರರಿಗೆ ಶುಭ ಸುದ್ದಿ

ಕೊರೋನಾ ಹಿನ್ನಲೆಯಲ್ಲಿ ಪಿಎಂ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪರಿತರ ಚೀಟಿ ಹೊಂದಿದವರಿಗೆ 5 ಕೆ.ಜಿ ಅಕ್ಕಿ ವಿತರಸಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜುಗೌಡ ತಿಳಿಸಿದ್ದಾರೆ.