ಬೆಂಗಳೂರು: ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪತ್ರಿಕೆಗಳಲ್ಲಿ ವರದಿಯಾಗಿರುವ ಸುದ್ದಿಯನ್ನು ಹಂಚಿಕೊಡಿರುವ ಅವರು, ಕರೋನ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಮೂಲಕ ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿರುವವರ ಕಷ್ಟಗಳನ್ನು ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ಯಾಂಗೊಲಿನ್ ಗೂ ನಡೆಯಿತು ಕೊರೊನಾ ಪರೀಕ್ಷೆ!

ಕ್ವಾರಂಟೈನ್ ಸೆಂಟರ್ ಬಳಿ ಹೆಣ್ಣು ಪ್ಯಾಂಗೊಲಿನ್ ಗೆ ಕೊರೊನಾ ಪರೀಕ್ಷೆ ನಡೆದಿದೆ. ಬಾರಂಬಾ ವಲಯದ ಮಹುಲಿಯಾ ಯುಜಿಎಂಇ ಶಾಲೆಯ ಬಳಿ ತೆರೆಯಲಾಗಿರುವ ಕ್ವಾರಂಟೈನ್ ಕೇಂದ್ರದ ಬಳಿ ಐದು ವರ್ಷದ ಹೆಣ್ಣು ಪ್ಯಾಂಗೊಲಿನ್ ನನ್ನು ರಕ್ಷಿಸಲಾಗಿತ್ತು.

ಕಪ್ಪತ್ತಗುಡ್ಡ ಸಂರಕ್ಷಣೆಗೆ ಸ್ವಾಮೀಜಿಗಳ ನೇತೃತ್ವದಲ್ಲಿ ಜನಾಂದೋಲನವೇ ಪರಿಹಾರ : ಜಾರಕಿಹೊಳಿ

ಕಪ್ಪತ್ತಗುಡ್ಡ ರಕ್ಷಣೆ ಮಾಡುವ ವಿಚಾರದಲ್ಲಿ ನಮ್ಮ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಆದರೆ ಈಗೀನ ಬಿ.ಎಸ್.ವೈ ಸರ್ಕಾರ ಗಣಿಗಾರಿಕೆ ಮುಕ್ತ ಮಾಡುವಲ್ಲಿ ಬಹುತೇಕ ಕೆಲಸ ಮುಗಿಸಿದೆ.

ಸಿಕ್ಕ ಸಿಕ್ಕವರಿಗೆ ಚಾಕು ಇರಿತ ನಾಲ್ವರು ಗಂಭೀರ, ಓರ್ವ ಸಾವು!

ಬೆಂಗಳೂರು : ವ್ಯಕ್ತಿಯೊಬ್ಬ ದಾರಿಯಲ್ಲಿ ಹೋಗುತ್ತ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದಾನೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.