ರಾಯಚೂರು : ಕೊರೊನಾ ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರಾಗಲಪರ್ವಿ ಗ್ರಾಮದಲ್ಲಿ ನಡೆದಿದೆ.
65 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಳ್ಳಾರಿಯಲ್ಲಿ ಕ್ವಾರಂಟೈನ್ ಆಗಿದ್ದ ವೃದ್ಧನಿಗೆ ಇತ್ತೀಚೆಗೆ ಸೋಂಕು ತಗುಲಿತ್ತು. ಕ್ವಾರಂಟೈನ್ ಅವಧಿ ಮುಗಿದು ಸೋಂಕಿನಿಂದ ಗುಣಮುಖನಾಗಿದ್ದ ಕೂಡ. ಆದರೆ ಗುಣಮುಖರಾದರೂ ಜನರು ಬೇರೆ ದೃಷ್ಟಿಯಿಂದ ನೋಡುತ್ತಿದ್ದ ಕಾರಣ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿದಿದ್ದರು ಎಂಬ ಮಾಹಿತಿ ಲಭಿಸಿದೆ.
ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.