ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ ನಡೆದಿದೆ.

ವಿದ್ಯಾರ್ಥಿನಿಯಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವಿದ್ಯಾರ್ಥಿನಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದರಿಂದಾಗಿ ನೂರಾರು ವಿದ್ಯಾರ್ಥಿಗಳಿಗೆ ಹಾಗೂ ಅವರ ಪಾಲಕರಿಗೆ ಆತಂಕ ಶುರುವಾಗಿದೆ.

ಕಾರಟಗಿಯ ಖಾಸಗಿ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಸೋಂಕಿತೆ ಕಳೆದ ಎರಡು ಪರೀಕ್ಷೆಗಳನ್ನು ಎಲ್ಲರಂತೆ ಸಾಮೂಹಿಕವಾಗಿ ಖಾಸಗಿ ಶಾಲೆಯ ರೂಂನಲ್ಲಿ ಬರೆದಿದ್ದಳು. ಬುಧವಾರ ಕೂಡ ಅದೇ ರೀತಿ ಪರೀಕ್ಷೆಗೆ ಹಾಜರಾಗಿದ್ದ ವೇಳೆ ಸೋಂಕು ದೃಢಪಟ್ಟ ರಿಪೋರ್ಟ್ ಬಂದಿದೆ.

ವರದಿ ಬರುತ್ತಿದ್ದಂತೆ ವಿದ್ಯಾರ್ಥಿನಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಯಿತಾದರೂ ಸೋಂಕಿನಿಂದ ಭಯಭೀತಳಾದ ವಿದ್ಯಾರ್ಥಿನಿ ಪರೀಕ್ಷೆ ಅರ್ಧಕ್ಕೆ ನಿಲ್ಲಿಸಿ ಆಂಬ್ಯುಲೆನ್ಸ್ ನಲ್ಲಿ ಚಿಕಿತ್ಸೆಗೆ ತೆರಳಿದ್ದಾಳೆ. ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಕೂಲಿ ಅರಸಿ ತೆರಳಿದ್ದ ತಂದೆ ತಾಯಿ ಜೊತೆ ತೆರಳಿದ್ದ ವಿದ್ಯಾರ್ಥಿನಿ, ಪರೀಕ್ಷೆ ಇದ್ದುದರಿಂದ ಕಾರಟಗಿಯ ತಮ್ಮ ನಿವಾಸಕ್ಕೆ ಬಾರದೆ ಸಿಂಧನೂರಿನಲ್ಲಿನ ಅವರ ಚಿಕ್ಕಮ್ಮಳ ಮನೆಯಲ್ಲಿ ಉಳಿದಿದ್ದಳು. ಅಲ್ಲಿಂದ ಪರೀಕ್ಷೆಗೆ ಬರುತ್ತಿದ್ದಳು.

ಬೆಂಗಳೂರಿನಿಂದ ಬಂದಿದ್ದ ವಿದ್ಯಾರ್ಥಿನಿಯ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು. ಈ ವಿಷಯವನ್ನ ಪರೀಕ್ಷಾ ಕೇಂದ್ರದಲ್ಲಿ ಹೇಳದೆ ಇರುವುದರಿಂದಾಗಿ ಈ ಅವಘಡ ಸಂಭವಿಸಿದೆ. ಈ ವಿದ್ಯಾರ್ಥಿನಿ ಸಂಪರ್ಕ ಬಂದಿರುವ 18 ಜನ ವಿದ್ಯಾರ್ಥಿಗಳು, 4 ಜನ‌ ರೂಂ ಸೂಪರ್‌ವೈಜರ್‌ ಗಳನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ದತೆ ನಡೆಸಿದೆ ಎಂದು ಕೊಪ್ಪಳ ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ ಮಾಹಿತಿ ನೀಡಿದರು.

Leave a Reply

Your email address will not be published.

You May Also Like

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಖರ್ಗೆ

ಇದೇ 19ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು.

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಹಿಳೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ.

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…