ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು. ಗದಗ ತಹಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗದಗ ನಗರ, ನಾಗಾವಿ ತಾಂಡಾ, ಅಡವಿಸೋಮಾಪೂರ ತಾಂಡಾ, ಕೋಟುಮಚಗಿ ಗ್ರಾಮದಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿ ಓಡಾಟ ನಡೆಸುತ್ತಿದ್ದಾರೆ ಎನ್ನುವ ದೂರಿನ ಮೇಲೆ ತಹಶೀಲ್ದಾರ್, ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದರು.
ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!
